ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ
ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ JCI ಸಿಟಿ ಕುಂದಾಪುರ ಆಯೋಜನೆಯ ‘Think big grow big’ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೆಸಿಐ ಕ್ಯೂನಿ ಡಿ ಕೊಸ್ಟಾ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.
ಜೆಸಿಐ ಸಿಟಿ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕುಲಾಲ್,ಜೆಸಿಐ ನಿಕಟಪೂರ್ವ ಅಧ್ಯಕ್ಷ ಹುಸೆನ್ ಹೈಕಾಡಿ, ಮತ್ತು ವಿಜಯ ಕುಮಾರ್ ಹಾಗೂ ಜನತಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಅಭಿಜಿತ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.



























































































































































































































































































































































































































































































































































































































































































































































































































































































































































































































































































































































































































































































































































































































































































