ಕುಂದಾಪುರ

ಅನಾರೋಗ್ಯ ಪೀಡಿತ ವ್ಯಕ್ತಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ‌ ರಕ್ತದಾನ

Share

ಕುಂದಾಪುರ:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಖುದ್ದಾಗಿ ರಕ್ತದಾನವನ್ನು ಮಾಡುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಕುಂದಾಪುರ ತಾಲೂಕಿನ ಶಂಕರನಾರಾಯಣ ಭಾಗದ ಉದಯ್ ಆಚಾರ್ಯ ಎಂಬವರು ಅನಾರೋಗ್ಯ ನಿಮಿತ್ತ ಕುಂದಾಪ್ರದ ಆಸ್ಪತ್ರೆಗೆ ದಾಖಲಾಗಿದ್ದರು‌.ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆವಿದ್ದು.ಬ್ಲಡ್ ಬ್ಯಾಂಕ್‌ಗಳಲ್ಲಿ ವಿಚಾರಿಸಿದಾಗ ರಕ್ತದ ಕೊರತೆಯಿಂದ ಸೂಕ್ತ ಸಮಯದಲ್ಲಿ ರೋಗಿಗೆ ರಕ್ತ ಸಿಗಲಿಲ್ಲ.ರೋಗಿಗೆ ತುರ್ತು ಸಂದರ್ಭದಲ್ಲಿ ರಕ್ತ ನೀಡಲೆ ಬೇಕಾಗಿದ್ದರಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು.ಯಾವುದೇ ರೀತಿಯ ಪ್ರಯತ್ನದ ನಡುವೆ ರಕ್ತ ಸಿಗದ ಕಾರಣ ರೋಗಿಯ ನೆರವಿಗೆ ನಿಂತವರೇ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು.
ರೋಗಿಯ ಕುಟುಂಬದವರ ತುರ್ತು ಕೆರೆಗೆ ಸ್ಪಂದಿಸಿದ
ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರೇ ಖುದ್ದಾಗಿ ರಾತ್ರಿಗೆ ಕುಂದಾಪ್ರ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ರಕ್ತದಾನ ಮಾಡಿದ್ದಾರೆ.ಶಾಸಕರ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ರಕ್ತದ ಅವಶ್ಯಕತೆ ಬಹಳಷ್ಟು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಕ್ತದಾನ ಮಾಡಲು ಮುಂದೆ ಬರಬೇಕೆಂದು ಶಾಸಕರು ವಿನಂತಿಸಿ ಕೊಂಡಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago