ಕುಂದಾಪುರ:ಯಕ್ಷಗಾನ ಕಲಾರಂಗ ಉಡುಪಿ,ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್,ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್,ಯಕ್ಷನಿಧಿ,ವಿದ್ಯಾ ಪೋಷಕ್ ಮನೆ ಹಸ್ತಾಂತರ ,ಯಕ್ಷಶಿಕ್ಷಣ ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪ್ರಾಯೋಜಕತ್ವದಲ್ಲಿ ದಾನಿಗಳ ನೆರವಿನಿಂದ ಹೆಮ್ಮಾಡಿ ಗ್ರಾಮದ ಕಟ್ಟು ಎಂಬಲ್ಲಿ ನಿರ್ಮಿಸಿದ ನೂತನೆ ಮನೆ ಸರಸ್ವತಿ ನಿಲಯ ಅದರ ಹಸ್ತಾಂತ ಕಾರ್ಯಕ್ರಮ ಗುರುವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಜ್ಯೋತಿ ಬೆಳಗಿಸುವುದರ ಮುಖೇನ ನೂತನ ಮನೆಯನ್ನು ಉದ್ಘಾಟಿಸಿ ಮಾತನಾಡಿ,ಅತ್ಯಂತ ಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಾಸಕ್ಕೆ ಯೋಗ್ಯವಾದ ಮನೆಯನ್ನು ನಿರ್ಮಿಸಿಕೊಡುವುದರ ಮುಖೇನ ವಿಶಿಷ್ಟವಾದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಮಾಡುತ್ತಿರುವ ಯಕ್ಷಗಾನ ಕಲಾರಂಗ ಅವರ ಸೇವೆ ಅನನ್ಯವಾದದ್ದು ಎಂದು ಶ್ಲಾಘಿಸಿದರು.
ಕೃಷ್ಣಪ್ರಸಾದ್ ಅಡ್ಯಂತಾಯ ಅಧ್ಯಕ್ಷತೆ ವಹಿಸಿದ್ದರು.ಬಿ.ಎಸ್ ಸುರೇಶ್ ಶೆಟ್ಟಿ,ವೆಂಕಟೇಶ ಕಿಣಿ,ಯು.ವಿಶ್ವನಾಥ ಶೆಣೈ,ಯು.ಎಸ್ ರಾಜಗೋಪಾಲ ಆಚಾರ್ಯ,ಹೆಮ್ಮಾಡಿ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ,ರಾಜೇಶ್,ಗೋಪಾಲ ಶೆಟ್ಟಿ,ಎಸ್.ವಿ ಭಟ್,ವಿ.ಜಿ ಶೆಟ್ಟಿ,ಪ್ರೋ.ಕೆ ಸದಾಶಿವ ರಾವ್,ಶೋಭಾ ಜಿ ಪುತ್ರನ್,ಹೆಮ್ಮಾಡಿ ಶಾಲಾ ಮುಖ್ಯೋಪಾಧ್ಯಾಯ ಮಂಜು ಕಾಳವಾರ,ನರಸಿಂಹ ಮೂರ್ತಿ,ಬಿ.ಭುವನಪ್ರಸಾದ್ ಹೆಗ್ಡೆ,ಅನಂತ ರಾಜ್ ಉಪಾಧ್ಯಾಯ,ಸಂತೋಷ ಕುಮಾರ್ ಶೆಟ್ಟಿ,ಎ.ಅಜಿತ್ ಕುಮಾರ್,ಸುದರ್ಶನ ಬಾಯರಿ ಉಪಸ್ಥಿತರಿದ್ದರು.ಎಂ.ಗಂಗಾಧರ ರಾವ್ ಸ್ವಾಗತಿಸಿದರು.ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಚ್.ಎನ್ ಶೃಂಗೇಶ್ವರ ಸಹಕರಿಸಿದರು.ನಾರಾಯಣ ಹೆಗಡೆ ವಂದಿಸಿದರು.ದ್ವಿತೀಯ ಪಿ.ಯು.ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕಟ್ಟು ನಿವಾಸಿ ಸಿಂಚನಾ ಅವರಿಗೆ ವಿದ್ಯಾ ಪೋಷಕ್ ಮನೆಯನ್ನು ಹಸ್ತಾಂತರ ಮಾಡಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…