ಕುಂದಾಪುರ:ಮನೋಸೋ ಇಚ್ಛೆ ಮರಗಳನ್ನು ಕಡಿದು ಭೂಮಿಯನ್ನು ಬಗೆದಿದ್ದರ ಪರಿಣಾಮ ಪ್ರಕೃತಿಯಲ್ಲಿ ಅಸಮಾತೋಲನ ಉಂಟಾಗಿ ಮಳೆ,ಬೆಳೆ ಕುಂಠಿತವಾಗುತ್ತಿದೆ.ಶುದ್ಧ ಗಾಳಿ ಸೇವನೆಗೂ ಪರಿತಪಿಸುವಂತೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬೈಂದೂರು ವಲಯದ ಬಡಾಕೆರೆ ಉತ್ತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು.
ಭೂಮಿ ಹಸಿರಾಗಿದ್ದಾರೆ ಮಾತ್ರ ಮಾನವ ಸಹಿತ ಜೀವಿ ಸಂಕುಲಗಳು ಬದುಕಬಹುದಾಗಿದೆ.ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವುದರ ಮೂಲಕ ಪ್ರಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ವಲಯಾ ಅರಣ್ಯಾಧಿಕಾರಿ ಕಿರಣ್ ಬಾಬು,ಬಡಾಕೆರೆಯನ್ನು ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ ಮೂರ್ತಿ ಲೋಕೇಶ್ ಅಡಿಗ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಬಾಬು ದೇವಾಡಿಗ,ಆರ್.ಎಫ್.ಒ ದಿಲೀಫ್,ವಕೀಲರಾದ ವಿಶ್ವನಾಥ ಶೆಟ್ಟಿ ಗಂಟಿಹೊಳೆ,ಮಹೇಂದ್ರ ಪೂಜಾರಿ,ಅಬ್ದುಲ್ ಖಾದರ್,ಯೂಸಫ್,ವಾಸು ಪೂಜಾರಿ,ವೇದ ಮೂರ್ತಿ ನಾಗೇಂದ್ರ ಅಡಿಗ,ಪೆÇೀಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಶ್ರೀಧರ ಬಡಾಕೆರೆ ಸ್ವಾಗತಿಸಿದರು.ವೇದ ಮೂರ್ತಿ ಲೋಕೇಶ್ ಅಡಿಗ ನಿರೂಪಿಸಿದರು.ಮುಖ್ಯೋಪಾಧ್ಯಾಯಿನಿ ರೇಣುಕಾ ವಂದಿಸಿದರು.ಶಾಲಾ ಆವರಣದಲ್ಲಿ ಹೊಸ ಕೈ ತೋಟವನ್ನು ರಚಿಸಲಾಯಿತು.ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.ಆರ್ಯ ಬಿಲ್ಡ್‍ಕೇರ್ ಮಾಲೀಕರಾದ ನಾಗೇಂದ್ರ ದೇವಾಡಿಗ,ಲಂಬೋದರ ಶೆಟ್ಟಿ,ಆರ್.ಕೆ ರಾಘು ಉಪ್ಪುಂದ ಅವರು ಗಿಡಗಳನ್ನು ಕೊಡುಗೆಯಾಗಿ ನೀಡಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…