ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಜೂನ್.15 ರ ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಮುಖೇನ ಜನಪ್ರೀತಿ ಗಳಿಸಿದೆ.
ಸಂಘದ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಜತೆಗೆ ಆರೋಗ್ಯ ಶಿಬಿರ,ರಕ್ತದಾನ ಶಿಬಿರ,ಐ ಕ್ಯಾಂಪ್ ಆಯೋಜನೆ ಮಾಡುವುದರ ಮುಖೇನ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತಲೂ ಗುಣಮಟ್ಟದ ಸೇವೆಯನ್ನು ನೀಡುತ್ತಿರುವ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಜನರ ಅಚ್ಚುಮೆಚ್ಚಿನ ಸಂಘಗಳೊಂದಾಗಿ ಗುರುತಿಸಿಕೊಂಡಿದೆ.ಜೂ.15 ರ ಶನಿವಾರ ದಂದು ಸಂಘದ ಪ್ರಧಾನ ಕಛೇರಿ ನಾವುಂದ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯ ನಡೆಯಲಿದೆ.
ಸಂಘದ ಪ್ರಧಾನ ಕಛೇರಿ ನವೀಕೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸಭಾ ಕಾರ್ಯಕ್ರಮ ಜರುಗಲಿದೆ.ಮಧ್ಯಾಹ್ನ 2 ಗಂಟೆ ಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ವತಿಯಿಂದ ನಾಗಶ್ರೀ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನವೀಕೃತ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಅಧ್ಯಕ್ಷತೆ ವಹಿಸಿಸಲಿದ್ದಾರೆ.ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಮತ್ತು ಬಿ.ಎಂ ಸುಕುಮಾರ ಶೆಟ್ಟಿ,ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ್ ಹೆಗ್ಡೆ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸೇರಿದಂತೆ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಾಜು.ಎಸ್ ಪೂಜಾರಿ ಅವರು ತಿಳಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…