ಕುಂದಾಪುರ

ಜೂ.15 ರಂದು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನಾ ಸಮಾರಂಭ

Share

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಜೂನ್.15 ರ ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಮುಖೇನ ಜನಪ್ರೀತಿ ಗಳಿಸಿದೆ.

ಸಂಘದ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಜತೆಗೆ ಆರೋಗ್ಯ ಶಿಬಿರ,ರಕ್ತದಾನ ಶಿಬಿರ,ಐ ಕ್ಯಾಂಪ್ ಆಯೋಜನೆ ಮಾಡುವುದರ ಮುಖೇನ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತಲೂ ಗುಣಮಟ್ಟದ ಸೇವೆಯನ್ನು ನೀಡುತ್ತಿರುವ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಜನರ ಅಚ್ಚುಮೆಚ್ಚಿನ ಸಂಘಗಳೊಂದಾಗಿ ಗುರುತಿಸಿಕೊಂಡಿದೆ.ಜೂ.15 ರ ಶನಿವಾರ ದಂದು ಸಂಘದ ಪ್ರಧಾನ ಕಛೇರಿ ನಾವುಂದ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯ ನಡೆಯಲಿದೆ.
ಸಂಘದ ಪ್ರಧಾನ ಕಛೇರಿ ನವೀಕೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸಭಾ ಕಾರ್ಯಕ್ರಮ ಜರುಗಲಿದೆ.ಮಧ್ಯಾಹ್ನ 2 ಗಂಟೆ ಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ವತಿಯಿಂದ ನಾಗಶ್ರೀ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನವೀಕೃತ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಅಧ್ಯಕ್ಷತೆ ವಹಿಸಿಸಲಿದ್ದಾರೆ.ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಮತ್ತು ಬಿ.ಎಂ ಸುಕುಮಾರ ಶೆಟ್ಟಿ,ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ್ ಹೆಗ್ಡೆ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸೇರಿದಂತೆ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಾಜು.ಎಸ್ ಪೂಜಾರಿ ಅವರು ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago