ಡಾ.ಎಂ ರಾಜೇಂದ್ರ ಕುಮಾರ್‍ಗೆ ಸಹಕಾರಿ ಸಂವರ್ಧಕ ಪ್ರಶಸ್ತಿ ಪ್ರದಾನ

ಕುಂದಾಪುರ:ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಪ್ರಧಾನ ಕಚೇರಿ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರಿ ಸಂವರ್ಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ,ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.