ಕುಂದಾಪುರ:ಗ್ರಾಮಕ್ಕೆ ಅನುಕೂಲವಾಗುವಂತಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ಯಾವುದೆ ರೀತಿ ಅನುದಾನ ನೀಡುತ್ತಿಲ್ಲ ಹಾಗಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೊಡಕಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮದ ಮಾಸ್ತಿಕಟ್ಟೆ ವೆಂಕಮ್ಮ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಬುಧವಾರ ನಡೆದ ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ಹಾಗೂ ಗ್ರಾಮದ ಅಭಿವೃದ್ಧಿಗೆ ಯಾವ ರೀತಿ ಯೋಜನೆಗಳನ್ನು ಕೈಗೊಳ್ಳಬಹುದು ಎನ್ನುವುದರ ಬಗ್ಗೆ ಚರ್ಚಿಸಬೇಕಾದ ಅಗತ್ಯತೆ ಇದೆ.ಪಂಚಾಯಿತಿ ಮಟ್ಟದ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಮಾಡುವುದರಿಂದ ಸ್ಥಳೀಯರಿಗೆ ಅನುಕೂಲವಾಗುವುದರ ಜತೆಗೆ ಅವರ ಜೀವನ ಮಟ್ಟ ಕೂಡ ಸುಧಾರಿಸಲಿದೆ ಎಂದರು.
ಹಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿಗ,ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹಾಗೂ ಸದಸ್ಯರು,ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.ನಾನಾ ರೀತಿಯ ಸಮಸ್ಯೆಗಳ ಕುರಿತು ಗ್ರಾಮಸ್ಥರು ಶಾಸಕರಿಗೆ ಅಹವಾಲುಗಳನ್ನು ನೀಡಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…