ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿಯಾದ ಯೋಗೀಶ್ ( 22) ಎನ್ನುವ ಯುವಕ ತನ್ನ ಸ್ನೇಹಿತನೊಂದಿಗೆ ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ಕಿನಾರೆ ಬಳಿ ಜೂನ್.19 ರಂದು ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ.ಯೋಗೀಶ್ ಅವರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಮೂಲಕ ಸಮುದ್ರದಲ್ಲಿ ಹುಡುಕಾಟ ಮುಂದುವರೆಸಲಾಗಿದೆ.
ಗಂಗೊಳ್ಳಿ ಕಡಲ ತೀರದಿಂದ ಸುಮಾರು ಎಂಟು ಮಾರು ದೂರದಲ್ಲಿ ಸಮುದ್ರದಲ್ಲಿ ಶವ ತೇಲುತ್ತಿರುವುದರ ಬಗ್ಗೆ ಸ್ಥಳೀಯ ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಬೋಟ್ ಮೂಲಕ ಶುಕ್ರವಾರ ವಿಶೇಷ ಕಾರ್ಯಾಚರಣೆ ಮೂಲಕ ಹುಡುಕಾಟ ನಡೆಸಲಾಗಿದೆ.ಆದರೆ ತಿಪಟೂರಿನ ಯೋಗೀಶ್ ಇನ್ನೂ ಪತ್ತೆ ಆಗಿಲ್ಲ.
ಕಾರ್ಯಾಚರಣೆಯಲ್ಲಿ ಕುಂದಾಪುರ ಸಿಪಿಐ ನಂದಕುಮಾರ ಮತ್ತು ಪಿಎಸ್‍ಐ ಪ್ರಸಾದ್,ಬೈಂದೂರು ಸಿಪಿಐ ಸವಿತ್ರತೇಜ,ಗಂಗೊಳ್ಳಿ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ಹಾಗೂ ಅಶೋಕ ಪೂಜಾರಿ ಬಿಜಾಡಿ ಭಾಗವಹಿಸಿದ್ದರು.ಮುಳುಗುತಜ್ಞ ದಿನೇಶ್ ಖಾರ್ವಿ ಲೈಟ್‍ಹೌಸ್ ಗಂಗೊಳ್ಳಿ ಮತ್ತು ಕರಾವಳಿ ಪೆÇಲೀಸ್ ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಸಮುದ್ರದಲ್ಲಿ ಕಾರ್ಯಚರಣೆ ನಡೆಸಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…