ಕುಂದಾಪುರ

ಮುಳ್ಳಿಕಟ್ಟೆ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ,ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ ಪೊಲೀಸರು

Share

ಕುಂದಾಪುರ:ಸಿಸಿ ಟಿವಿ ಮಾನಿಟರಿಂಗ್ ತಂಡದ ಸೂಚನೆ ಮೇರೆಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಹೊಸಾಡು-ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಕಳ್ಳತನವನ್ನು ಮಾಡಲು ಯತ್ನಿಸುತ್ತಿದ್ದ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಎಂಬಾತನನ್ನು ಗಂಗೊಳ್ಳಿ ಪೊಲೀಸ್ ಠಾಣೆ ಗುಪ್ತಚರ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ಮತ್ತು ಸಿಬ್ಬಂದಿಗಳು ಮಿಂಚಿನ ಕಾರ್ಯಚರಣೆ ಮೂಲಕ ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಶುಕ್ರವಾರ ತಡ ರಾತ್ರಿ 1.44 ರ ಸುಮಾರಿಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಮೇಜಿನ ಡ್ರಾವರ್ ಜಾಲಾಡುತ್ತಿರುವ ದೃಶ್ಯ ಅಂಕದಕಟ್ಟೆಯಲ್ಲಿ ಕಾರ್ಯಚರಣೆ ಮಾಡುತ್ತಿರುವ ಸೈನ್ ಇನ್ ಸೆಕ್ಯೂರಿಟಿ ಲೈವ್ ಮಾನಿಟರಿಂಗ್ ತಂಡದ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಕಛೇರಿ ಸಿಬ್ಬಂದಿಗಳು ಕೂಡಲೆ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.ತಕ್ಷಣ ಕಾರ್ಯಪ್ರವೃತರಾದ ಗಂಗೊಳ್ಳಿ ಪೆÇಲೀಸ್ ಠಾಣೆ ಗುಪ್ತಚರ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ನೇತೃತ್ವದ ಬೀಟ್ ಪೊಲೀಸ್ ತಂಡ ಮಾಹಿತಿ ಸಿಕ್ಕ ಹತ್ತೆ ನಿಮಿಷದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿ ಕ್ಷೀಪ್ರ ಕಾರ್ಯಚರಣೆ ಮೂಲಕ ಆರೋಪಿ ಕೇರಳದ ಮೂಲದ ಬಾಬು ಎಂಬುವವನನ್ನು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.ಹಲವು ಪ್ರಕರಣಗಳಲ್ಲಿ ಭಾಗಿದಾರನಾಗಿರುವ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.


Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago