ಕುಂದಾಪುರ:ಸ್ತ್ರೀ ಸಾಮಾನ್ಯರು ಕೂಲಿ ಕಾರ್ಮಿಕರು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಿನಂಪ್ರತಿ ದೂರದ ಕುಂದಾಪುರ ಪೇಟೆಗೆ ತೆರಳುತ್ತಾರೆ.ಜನ ಸಂಖ್ಯೆಗೆ ಅನುಗುಣವಾಗಿ ಆಲೂರು-ಗುಡ್ಡೆಯಂಗಡಿ ಮಾರ್ಗದಲ್ಲಿ ಬಸ್‍ಗಳು ಓಡಾಟ ಮಾಡದೆ ಇದ್ದಿದ್ದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ.ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ಸಂಕಷ್ಟವನ್ನು ತಪ್ಪಿಸಲು ಆಲೂರು ಗುಡ್ಡೆಯಂಗಡಿ ಭಾಗಕ್ಕೆ ಸರಕಾರಿ ಬಸ್ ಓಡಿಸಲು ಕೂಡಲೆ ಕ್ರಮ ಕೈಗೊಳ್ಳಬೇಕೆಂದು ರಾಜು ಪಡುಕೋಣೆ ಆಗ್ರಹಿಸಿದರು.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಆಲೂರು,ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಆಲೂರು,ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಲೂರು ಘಟಕ,ಜನವಾದಿ ಮಹಿಳಾ ಸಂಘಟನೆ ನಾಡ ವಲಯ ವತಿಯಿಂದ ಸೋಮವಾರ ಆಲೂರುನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಅಧ್ಯಕ್ಷ ಸುರೇಶ ಕಲಾಗಾರ್ ಮಾತನಾಡಿ ಶಕ್ತಿ ಯೋಜನೆ ಪ್ರಯೋಜನಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಿಗೆ,ಮಹಿಳೆಯರಿಗೆ ದೊರಕಬೇಕು ಎಂದು ಹೇಳಿದರು.
ಶ್ರೀಧರ ನಾಡ,ಗಣೇಶ ಆಲೂರು,ಶೋಭಾ ಕೆರೆಮನೆ,ಮನೋರಮಾ ಭಂಡಾರಿ,ನಾಗರತ್ನ ನಾಡ,ವೇಂಕಟೇಶ ಕೋಣಿ,ಸಂತೋಷ್ ಹೆಮ್ಮಾಡಿ, ಮತ್ತು ಸಂಘಟನೆಗಳ ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.ಮಳೆಯನ್ನು ಲೆಕ್ಕಿಸದೆ ಕೊಡೆಯನ್ನು ಹಿಡಿದುಕೊಂಡು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಆಲೂರು ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಮುಖೇನ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…