ಮಂಗಳೂರು:ಭಾರಿ ಮಳೆಗೆ
ಕಂಪೌಂಡ್ ಗೋಡೆ ಮನೆ ಗೋಡೆ ಮೇಲೆ ಕುಸಿದು ಬಿದ್ದು ಒಂದೆ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.
ಮನೆಯೊಳಗೆ ವಿಶ್ರಾಂತಿ ಪಡೆದು ಕೊಳ್ಳುತ್ತಿದ್ದ ರಿಹಾನ ಮಂಝಿಲ್ ಯಾಸಿರ್(45), ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಎಂಬುವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ನಿರ್ವಹಣೆ ಕಾರ್ಯ ನಿರ್ವಹಿಸುತ್ತಿದ್ದರು.
ರಾತ್ರಿ ಸಮಯದಲ್ಲಿ ಸುರಿದ ಧಾರಾಕಾರ ಮಳೆಗೆ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ.ಘಟನೆಯಲ್ಲಿ
ಮನೆಯೊಳಗೆ ನಿದ್ರಿಸುತ್ತಿದ್ದ ಒಂದೆ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ಹೋಗುತ್ತಿದ್ದಾರೆ.ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಯಾಸಿರ್ ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದೆಯಷ್ಟೇ ಮನೆಗೆ ವಾಪಸ್ಸಾಗಿದ್ದರು.ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು,ಯಾವುದೇ ಪ್ರಾಣಾಪಾಯವಾಗಿರಲಿಲ್ಲ ಎನ್ನಲಾಗಿದೆ.ಸತತ ಕಾರ್ಯಾಚರಣೆ ಮೂಲಕ ಮೃತ ದೇಹವನ್ನು ಹೊಸ ಹೊರ ತೆಗೆಯಲಾಗಿದೆ.ತನಿಖೆ ಮುಂದುವರಿದಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…