ತುಂಬಿ ಹರಿಯುತ್ತಿದೆ ಕುಮಾರಧಾರ,ನದಿಗೆ ಇಳಿಯದಂತೆ ಭಕ್ತರಿಗೆ ಎಚ್ಚರಿಕೆ

ಮಂಗಳೂರು:ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರ ಸ್ನಾನಘಟ್ಟ ಮುಳುಗಡೆ ಆಗಿದೆ.ಮುಂಜಾಗೃತ ಕ್ರಮದ ಭಾಗವಾಗಿ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.ಭಕ್ತರು
ನದಿ ದಡ ದಲ್ಲೇ ತೀರ್ಥಸ್ನಾನ ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಮಾಡುತ್ತಿದ್ದಾರೆ.
ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ಮಳೆನೀರಿನಿಂದ ತುಂಬಿ ಹರಿಯುತಿದೆ.
ಕುಮಾರಧಾರ ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು,ಹೋಮ್ಗರ್ಡ್ಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.