ಕುಂದಾಪುರ:ತಾಲೂಕಿನ ಅಮಾಸೆಬೈಲ್ ಶಂಕರನಾರಾಯಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಳ್ಳಂಜೆ ಹೆಗೊಡ್ಡು ರಟ್ಟಾಡಿ ನಡಂಬೂರು ಜನತಾ ಕಾಲೋನಿ ಮುಂತಾದ ಭಾಗದಲ್ಲಿ ಬುಧುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಬೀಸಿದ ಸುಂಟರಗಾಳಿ ಅಬ್ಬರಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದ್ದು ಹಲವಾರು ಮನೆಗಳಿಗೆ ಹಾನಿ ಉಂಟಾಗಿದೆ,ಸಾವಿರಾರು ಅಡಿಕೆ ಹಾಗೂ ಇನ್ನಿತ್ಯಾದಿ ಬೃಹತಾಕಾರದ ಮರಗಳು ಧರೆಗುರುಳಿದ್ದು ಲಕ್ಷಾಂತರ.ರೂ ನಷ್ಟವಾಗಿದೆ.
ಕುಳ್ಳಂಜೆ ಹೆಗೊಡ್ಡು ಸುಬ್ಬ ನಾಯ್ಕ ಹಾಗೂ ಧರ್ಮರಾಜ ನಾಯ್ಕ ಎಂಬವರ ಮನೆಯ ಸಾವಿರಕ್ಕೂ ಮಿಕ್ಕಿ ಅಡಕೆ ಮರಗಳು ಸಂಪೂರ್ಣವಾಗಿ ಗಾಳಿಯ ಅಬ್ಬರಕ್ಕೆ ತುಂಡಾಗಿ ನೆಲಕ್ಕುರುಳಿವೆ ಗಾಳಿಯ ರಭಸಕ್ಕೆ ದನದ ಕೊಟ್ಟಿಗೆಯ ಸಿಮೆಂಟ್ ಸೀಟುಗಳು ಬಹುದೂರ ಹಾರಿ ಹೋಗಿದೆ. ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…