ಬೈಂದೂರು:ಧಾರಾಕಾರವಾಗಿ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಬೋರರ್ಗೆರೆದು ತುಂಬಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಮತ್ತು ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಳ್ಳಿಯಲ್ಲಿ ನೆರೆ ನೀರು ಆವರಿಸಿದೆ.ಕೃಷಿ ಭೂಮಿಗಳು ನೀರಿನಲ್ಲಿ ಮೂಳುಗಿದ್ದು ಅಪಾರ ಹಾನಿ ಗುರುವಾರ ಸಂಭವಿಸಿದೆ.ಜೀವನ ಅಸ್ತವ್ಯಸ್ಥವಾಗಿದೆ.ಮನೆ ಒಳಗೆ ನೀರು ನುಗ್ಗಿದ್ದ ಪರಿಣಾಮ ಜನರಿಗೆ ಬಹಳಷ್ಟು ತೊಂದರೆ ಉಂಟಾಗಿದೆ.ಪ್ರತಿ ಮಳೆಗಾಲದಲ್ಲಿಯೂ ಸೌಪರ್ಣಿಕಾ ನದಿ ತೀರ ಪ್ರದೇಶವಾದ ಸಾಲ್ಬುಡ,ಚಿಕ್ಕಳ್ಳಿ,ಹೊಸಾಡು,ತ್ರಾಸಿ,ಕಡಿಕೆ,ಬಡಾಕೆರೆ ಭಾಗದಲ್ಲಿ ನೆರೆ ಕಾಣಿಸಿಕೊಳ್ಳುತ್ತದೆ.ನೆರೆ ನೀರಿನಿಂದ ಜನವಸತಿ ಪ್ರದೇಶ ಮತ್ತು ಕೃಷಿ ಭೂಮಿಗಳು ಮುಳುಗಡೆ ಆಗುತ್ತಿದ್ದು ಅಪಾರ ನಷ್ಟ ಉಂಟಾಗುವುದರ ಜತೆಗೆ ಜನ ಜಾನುವಾರುಗಳಿಗೆ ತೊಂದರೆ ಆಗುತ್ತಿದೆ.ನದಿ ದಂಡೆಯನ್ನು ಏರಿಸಿ ನದಿಯಲ್ಲಿನ ಹೂಳು ಮಣ್ಣುನ್ನು ಮೇಲಕ್ಕೆತ್ತಬೇಕ್ಕೆನ್ನುವ ನದಿ ಪಾತ್ರ ಪ್ರದೇಶದ ಜನರ ಬಹು ಕಾಲದ ಬೇಡಿಕೆ ಕುರಿತು ಯಾವುದೆ ಸರಕಾರ,ಜನಪ್ರತಿನಿಧಿಗಳು ಸ್ಪಂದನೆ ಮಾಡುತ್ತಿಲ್ಲ ಎಂದು ಜನರು ದೂರಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…