ಕುಂದಾಪುರ:ರಾಷ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಟ್ರಕ್ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಯೂರ್ಟನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಸಕ್ಕರೆ ತುಂಬಿದ ಲಾರಿ ಟ್ರಕ್‍ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆ ಮೇಲೆ ಉರುಳಿ ಬಿದ್ದಿದ ಘಟನೆ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಸಕ್ಕರೆ ಚೀಲ ರಸ್ತೆ ತುಂಬೆಲ್ಲಾ ಉರುಳಿ ಬಿದ್ದಿದ್ದು.ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಪರಿಣಾಮ ಸಕ್ಕರೆ ಚೀಲಕ್ಕೆ ಮಳೆ ನೀರು ತಾಗಿ ಸಾಕಷ್ಟು ಹಾನಿ ಉಂಟಾಗಿದೆ.ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಅಜಾಗರುಕತೆಯಿಂದ ಸರ್ಕಲ್‍ನಲ್ಲಿ ಟ್ರಕ್ ಚಾಲಕ ಯೂರ್ಟನ್ ತೆಗೆದುಕೊಂಡಿದ್ದರ ಪರಿಣಾಮ ಅಪಘಾತ ಸಂಭವಿಸಲು ಪ್ರಮುಖ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.ಸಕ್ಕರೆ ಚೀಲಗಳನ್ನು ಶಂಕರ್ ನಾಗ್ ಆಟೋ ಸ್ಟ್ಯಾಂಡ್‍ನ ಒಳಗಡೆ ದಾಸ್ತಾನು ಮಾಡಿದ ಬಳಿಕ ಬದಲಿ ವಾಹನದಲ್ಲಿ ಸಾಗಾಟವನ್ನು ಮಾಡಲಾಯಿತು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…