ಕುಂದಾಪುರ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ,ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

Share

Advertisement
Advertisement
Advertisement

ಬೈಂದೂರು:ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ,ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು.
ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ ಕುಸಿತ ಉಂಟಾಗಿದ್ದು ಸ್ಥಳಕ್ಕೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಜನರ ರಕ್ಷಣೆ, ಸ್ಥಳಾಂತರ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ಅಗತ್ಯ ಸೂಚನೆ ನೀಡಿದರು.
ನೆರೆ ಪೀಡಿದ ಪ್ರದೇಶದ ಜನತೆಗೆ ತುರ್ತಾಗಿ ಆಗಬೇಕಿರುವ ಅಗತ್ಯ ಮೂಲಸೌಕರ್ಯದ ಜತೆಗೆ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆಯೂ ಆದಷ್ಟು ಬೇಗ ಕ್ರಮ ವಹಿಸಬೇಕು. ಯಾರಿಗೂ ಕೂಡ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೇ ವೇಳೆ ಸ್ಥಳೀಯರದಿಂದಲೂ ಶಾಸಕರು ಮಾಹಿತಿ ಪಡೆದುಕೊಂಡರು.
ಎಚ್ಚರಿಕೆ ವಹಿಸಲು ಮನವಿ
ಎಡೆಬಿಡದೆ ಸುರಿಯುತ್ತಿರುವ ಮಳೆಯು ಇನ್ನಷ್ಟು ಅಪಾಯ ತಂದೊಡ್ಡುವ ಭೀತಿ ಇದ್ದು, ಕ್ಷೇತ್ರದ ಜನರು ಸಂಭಾವ್ಯ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕು. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು. ವಿಶೇಷವಾಗಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾಾರ್ಥಿಗಳು ಎಚ್ಚರ ವಹಿಸಬೇಕು. ಸಮುದ್ರ, ನದಿ ಹಾಗೂ ಡ್ಯಾಮ್‌ಗಳಿಗೆ ಈಜುವುದು,‌ ಇಳಿಯುವುದು ಇತ್ಯಾದಿ ಮಾಡಬಾರದು.‌ ನದಿ, ಹೊಳೆ, ತೋಡು, ಹಳ್ಳ ದಾಟುವಾಗ ಎಚ್ಚರ ವಹಿಸಬೇಕು. ನೀರಿನ ಕರೆ, ಬಾವಿ ಸಹಿತ ಮೂಲಗಳಿಗೆ ಮಕ್ಕಳನ್ನು ಬಿಡಬಾರದು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮನವಿ ಮಾಡಿದ್ದಾರೆ.
ವಿಪತ್ತು ನಿರ್ವಹಣ ತಂಡದ ಜತೆ ಭೇಟಿ
ಗುಲ್ವಾಡಿ ಗ್ರಾಮ ಪಂಚಾಯತ್ ವ್ಯಾಾಪ್ತಿಯ ಸೌಕೂರು ಬಳಿ ಮನೆಗೆ ಮಳೆ ನೀರಿನಿಂದ ನೀರು ನುಗ್ಗಿದ್ದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದ ವಿಪತ್ತು ನಿರ್ವಹಣ ತಂಡದ ಸದಸ್ಯರು ಭೇಟಿ ಸ್ಥಳಕ್ಕೆ ಭೇಟಿ ನೀಡಿದರು. ಮಳೆಗಾಲದ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಶಾಸಕರ ನೇತೃತ್ವದಲ್ಲಿ ಎರಡು ತಂಡ ರಚನೆ ಮಾಡಲಾಗಿದ್ದು, ಆ ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ವಿಪತ್ತು ನಿರ್ವಹಣೆ ಸಂಬಂಧ ಎರಡು ತಂಡಗಳು ಸ್ಥಳೀಯರು ಹಾಗೂ ಸ್ಥಳೀಯ ಕಾರ್ಯಕರ್ತರ ಮನ್ವಯದೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ.
ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಾಪ್ತಿಯ ಪಡುಕುದ್ರು ಎಂಬಲ್ಲಿ ಮಳೆಯಿಂದ ನೆರೆ ಉಂಟಾಗಿದ್ದು ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ನೇತೃತ್ವದ ವಿಪತ್ತು ನಿರ್ವಹಣಾ ತಂಡದ ಸಂಚಾಲಕರಾದ ರಾಘವೇಂದ್ರ ನೆಂಪು, ಸದಸ್ಯರಾದ ಚಂದ್ರ ಜೋಗಿ ಶಾನ್ಕಟ್ಟು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಬಳೆಗಾರ್, ಆರ್.ಐ. ರಾಘವೇಂದ್ರ, ಪಿ.ಡಿ.ಓ. ರಿಯಾಜ್ ಅಹಮದ್, ವಿ.ಎ. ಸೋಮಣ್ಣ ಅವರು ನೆರೆ ಪೀಡಿತ ಸ್ಥಳದ ಬಗ್ಗೆ ಮಾಹಿತಿ ಕಲೆಹಾಕಿದರು.
ತಹಶೀಲ್ದಾಾರ್ ಭೇಟಿ
ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮ್ಲಾಡಿ ಎಂಬಲ್ಲಿ ಮನೆಗಳಿಗೆ ನೆರೆ ನೀರು ನುಗ್ಗಿದ್ದು ಸ್ಥಳಕ್ಕೆ ತಹಶೀಲ್ದಾರ್ ಶೋಭಾ ಲಕ್ಷ್ಮೀ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಪಂಚಾಯತ್ ಸದಸ್ಯರಾದ ಅಶೋಕ್ ಬಳೆಗಾರ್, ಆರ್‌ಐ ರಾಘವೇಂದ್ರ, ಪಿಡಿಒ ರಿಯಾಜ್ ಅಹಮದ್, ವಿಎ ಸೋಮಣ್ಣ, ಹಾಗೂ ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ನೇತೃತ್ವದ ವಿಪತ್ತು ನಿರ್ವಹಣಾ ತಂಡದ ಸಂಚಾಲಕರಾದ ರಾಘವೇಂದ್ರ ನೆಂಪು, ಸದಸ್ಯರಾದ ಚಂದ್ರ ಜೋಗಿ ಶಾನ್ಕಟ್ಟು, ಹಾಗೂ ಸ್ಥಳೀಯರು ಭೇಟಿ ನೀಡಿದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago