ಕುಂದಾಪುರ

ತಾಂತ್ರಿಕ ಸಮಸ್ಯೆ:ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪೊಲೀಸ್ ಜೀಪ್ ಪಲ್ಟಿ

Share

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್‍ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಚಲಿಸುತ್ತಿದ್ದಾಗಲೆ ನಿಯಂತ್ರಣ ಕಳೆದುಕೊಂಡು ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸ್ಕಿಡ್ಡ್ ಆಗಿ ಪಲ್ಟಿ ಹೊಡೆದು ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದೆ.ಅಪಘಾತದಲ್ಲಿ ಪೊಲೀಸ್ ಜಿಪ್ ಡ್ರೈವರ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಂದೂರು ಸರ್ಕಲ್ ಇನ್‍ಸ್ಪೆಕ್ಟರ್ ಸವಿತ್ರ ತೇಜ,ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಗುಪ್ತಚರ ಪಿಎಸ್‍ಐ ಬಸವರಾಜ ಕಣಶೆಟ್ಟಿ ಹಾಗೂ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಅಪಘಾತಕ್ಕೆ ಈಡಾಗಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್‍ನಲ್ಲಿ ಕಾರವಾರ ಪೊಲೀಸ್ ಠಾಣೆ ಪೊಲೀಸ್ ಇನ್‍ಸ್ಪೆಕ್ಟರ್ ರಮೇಶ್ ಹುಣಾಗಾರ್ ಮತ್ತು ಸಿಬ್ಬಂದಿಗಳು ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಇಬ್ರಾಹಿಂ ಗಂಗೊಳ್ಳಿ ಆಂಬ್ಯುಲೆನ್ಸ್ ನೆರವಾದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago