ಮಂಗಳೂರು:ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ.
ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಪಕ್ಕದ ಕ್ಯಾಂಟಿನ್ ವೊಂದರಲ್ಲಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಲಕರಿಗೆ ಡಿಕ್ಕಿಯಾದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…