ಕುಂದಾಪುರ:ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ಸ್ಥಾನ ಪಡೆದು,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದಲ್ಲಿ 197ನೇ ಸ್ಥಾನವನ್ನು ಗಳಿಸಿದ್ದಾರೆ.ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ವಿದ್ಯಾರ್ಥಿನಿಯರಿಬ್ಬರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ.ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಜನತಾ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಬಂದಿದ್ದು ಉತ್ತಮ ಶಿಕ್ಷಣ ನೀಡುತ್ತಿದೆ.ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…