ಕುಂದಾಪುರ:ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಬುಧವಾರ ನಡೆಯಿತು.ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಆಲೂರು ಮಹಾಬಲ ಜೋಯಿಸ್,ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ,ಶಾಖಾಧಿಕಾರಿ ಸಂಜೀವ ಪೂಜಾರಿ,ಅಪ್ಪು ಕುಲಾಲ್,ತೇಜಪ್ಪ ಶೆಟ್ಟಿ,ರವಿ ಶೆಟ್ಟಿ ಆಲೂರು,ಸತೀಶ ಶೆಟ್ಟಿ,ಪ್ರಶಾಂತ ಕುಲಾಲ್,ಅರುಣ ಶೆಟ್ಟಿ,ಕೃಷ್ಣ ಶೆಟ್ಟಿ,ವಾಸುದೇವ ಶ್ಯಾನುಭಾಗ್,ರಾಘವೇಂದ್ರ ದೇವಾಡಿಗ,ಸಂತೋಷ ಪೂಜಾರಿ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಮತ್ತು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಟೆಂಡರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಠಲ್ ಸುವರ್ಣ ಹಾಗೂ ಆಲೂರು-ಹರ್ಕೂರು ಗ್ರಾಮಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಆಶಿಕ್ ಹುಸೇನ್,ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ದಿಲೀಫ್ ಕುಮಾರ್ ಅವರನ್ನು ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕೆ.ಕೆ ರಾಘು ರಟ್ಟಾಡಿ ಸ್ವಾಗತಿಸಿದರು.ಶಿಕ್ಷಕ ಉದಯ ಕುಮಾರ್ ಶೆಟ್ಟಿ ನಿರೂಪಿಸಿದರು.ಸುನೀಲ್ ನಾರ್ಕಳಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…