ಮಂಗಳೂರು:ಶಾಸಕ ಡಾ ವೈ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಕಾವೂರು ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಜಂಕ್ಷನ್ ಪಕ್ಕದಲ್ಲೇ ಇದ್ದ ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲಿಸರು ತಡೆದಂತಹ ಸಮಯದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ನೂರಕ್ಕು ಹೆಚ್ಚು ಮಂದಿ ಕಾರ್ಯಕರ್ತರು, ಮುಖಂಡರನ್ನುಪೊಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಇನಾಯತ್ ಆಲಿ,
ಕೆಪಿಸಿಸಿ ವಕ್ತಾರ ಎಂಜಿಹೆಗಡೆ,ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿದರು.
ಸುರತ್ಕಲ್,ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ,ಪಕ್ಷದ ಮುಂದಾಳುಗಳಾದ ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ…
ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…