ಕುಂದಾಪುರ

ಲಾರಿ ಚಾಸಿಸಿ ಬಳಸಿ ವಿನೂತನ ಮಾದರಿಯಲ್ಲಿ ನಿರ್ಮಿಸಿದ ಕಾಲುಸಂಕ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಉದ್ಘಾಟನೆ

Share

ಕುಂದಾಪುರ:ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಸಮೃದ್ಧ ಬೈಂದೂರು ಪರಿಕಲ್ಪನೆಯಡಿಲ್ಲಿ ಬೆಂಗಳೂರಿನ ಡಾ.ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್‌,ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸರ್ಕಾರಿ ವ್ಯವಸ್ಥೆಯ ಮೂಲಕ ಕಾಲು ಸಂಕ ನಿರ್ಮಿಸಲು ಅಸಾಧ್ಯ ಎನ್ನುವುದು ನಮ್ಮ ಗಮನದಲ್ಲಿತ್ತು.ಆದರೆ ಹಾಗೆಯೇ ಬಿಟ್ಟರೆ ನಮ್ಮ ಜನರ ಸಮಸ್ಯೆಯೂ ಬಗೆಹರಿಯುವುದಿಲ್ಲ ಎನ್ನುವುದೂ ಕೂಡಾ ಅರಿವಿತ್ತು. ಇದಕ್ಕಾಗಿ ನಾನು ಮತ್ತು ಅನುದೀಪ್ ಹೆಗ್ಡೆ ಅವರು ಸೇತುವೆಯ ರೀತಿಯಲ್ಲಿ ದಾನಿಗಳನ್ನು ಜೋಡಿಸುವ ಕೆಲಸ ಮಾಡಿದ್ದೇವೆ ಅಷ್ಟೇ, ಉಳಿದೆಲ್ಲವೂ ಕೂಡಾ ದೇವರು ದಾನಿಗಳ ಮೂಲಕ ಮಾಡಿಸಿದ್ದಾರೆ.ದೂರದ ಬೆಂಗಳೂರಿನಲ್ಲಿ ಕುಳಿತು ಅರುಣಾಚಲಮ್ ಟ್ರಸ್ಟ್ ನಮ್ಮ ಬೈಂದೂರಿನ ಕ್ಷೇತ್ರದ ಗ್ರಾಮೀಣ ಭಾಗದ ಬಗ್ಗೆ ಯೋಚಿಸುತ್ತದೆ ಎಂದರೆ ಅಂತಹ ಸಂಸ್ಥೆಗೆ ನಾವು ಎಷ್ಟು ಚಿರಋಣಿಗಳಾಗಿದ್ದರೂ ಸಾಲದು ಎಂದು ಅಭಿಪ್ರಾಯಿಸಿ ಟ್ರಸ್ಟ್ ಸಹಕಾರ ಮತ್ತು ಸ್ಥಳೀಯ ಜನರ ಶ್ರಮದಿಂದ ಇಂದು ಸುಸಜ್ಜಿತ ಕಾಲು ಸಂಕ ನಿರ್ಮಾಣಗೊಂಡಿದೆ. ಅರುಣಾಚಲಂ ಟ್ರಸ್ಟ್ ಮುಖ್ಯಸ್ಥರಿಗೆ, ಪದಾಧಿಕಾರಿಗಳಿಗೆ ಹಾಗೂ ಸ್ಥಳೀಯರಿಗೆ ಧನ್ಯವಾದ ಸಲ್ಲಿಸಿದರು.
ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟಿಗಳು ಹಾಗೂ ದಾನಿಗಳಾದ ಡಾ.ಆರ್.ಅರುಣಾಚಲಮ್ ಅವರ ಸುಪುತ್ರರಾದ ಡಾ. ರಮೇಶ್‌ ಅರುಣ್‌ ಅವರು ಮಾತನಾಡಿ ಬೈಂದೂರಿಗೆ ಕಾಲು ಸಂಕಗಳ ಅನಿವಾರ್ಯತೆಯನ್ನು ಶಾಸಕರು ತಿಳಿಸಿದಾಗ ಜನರ ಪರಿಸ್ಥಿತಿ ನೆನೆದು ದುಃಖವಾಗಿತ್ತು.ಕೂಡಲೇ ತಂದೆಯ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಅರಿತುಕೊಂಡು ಕಾಲುಸಂಕ ನಿರ್ಮಾಣಕ್ಕೆ ಸಹಕರಿಸುವ ಭರವಸೆ ನೀಡಿದ್ದೆವು.ಅದರಂತೆ ಇಂದು ಕಾಲುಸಂಕ ನಿರ್ಮಾಣಗೊಂಡಿದೆ. ಸಮಾಜಕಾರ್ಯ ಮಾಡಬೇಕೆಂದಾಗ ಅದಕ್ಕೆ ನಮ್ಮಲ್ಲಿನ ಬದ್ಧತೆಯ ಜೊತೆಗೆ ಸ್ಥಳೀಯರ ಇಚ್ಚಾ ಶಕ್ತಿಯು ಮುಖ್ಯವಾಗುತ್ತದೆ. ಬೈಂದೂರಿನಲ್ಲಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಇಚ್ಛಾಶಕ್ತಿ, ಬದ್ಧತೆ, ತೊಡಗಿಸಿಕೊಳ್ಳುವಿಕೆ ಅಭೂತಪೂರ್ವವಾಗಿತ್ತು. ಅದರ ಫಲವಾಗಿ ಇಂದು ಕಾಲುಸಂಕ ನಿರ್ಮಾಣಗೊಂಡಿದೆ. ಗ್ರಾಮೀಣ ಜನರ ಸೇವೆ ಮಾಡುವಂತಹ ಅವಕಾಶ ಕಲ್ಪಿಸಿದ ಗಂಟಿಹೊಳೆ ಹಾಗೂ ಅವರ ತಂಡಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟಿಗಳಾದ ಡಾ. ರಮೇಶ್‌ ಅರುಣ್‌, ಬೆಂಗಳೂರು ಟ್ರಿಪ್‌ ನಿರ್ವಿಘ್ನ ಮಾರ್ಕೆಟಿಂಗ್‌ ಇದರ ಮುಖ್ಯಸ್ಥರಾದ ಅನುದೀಪ್‌ ಹೆಗ್ಡೆ,ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಅಧ್ಯಕ್ಷರು ಬಿ.ಎಸ್.‌ ಸುರೇಶ್‌ ಶೆಟ್ಟಿ,ಹಿರಿಯರಾದ ಬಾಲಚಂದ್ರ ಭಟ್,ಯಡಮೊಗೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಾಣೇಶ್ ಯಡಿಯಾಲ್, ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಗಾಣಿಗ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇದರ ಆಡಳಿತ ಮೊಕ್ತೆಸರರಾದ ಸಚ್ಚಿದಾನಂದ ಚಾತ್ರ, ಉಳ್ಳೂರು ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ ಶೆಟ್ಟಿ, ಉಳ್ಳೂರು ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ಉಪಾಧ್ಯಕ್ಷ ಶೇಖರ ಪೂಜಾರಿ, ಅಮಾಸೆಬೈಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ, ಮಹಾಗಣಪತಿ ದೇವಸ್ಥಾನ ತೊಂಬಟ್ಟು ಧರ್ಮದರ್ಶಿಗಳು ಮತ್ತು ಆಡಳಿತ ಮೊಕ್ತೇಸರರಾದ ಸತ್ಯನಾರಾಯಣ ಉಡುಪ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago