ಕುಂದಾಪುರ:ಜೆಸಿಐ ಕುಂದಾಪುರ ಸಿಟಿ,ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕ ದಳ ಕುಂದಾಪುರ ಠಾಣೆ ಸಹಭಾಗಿತ್ವದಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಕಾಲೇಜಿನ ವಠಾರದಲ್ಲಿ ನಡೆಯಿತು.
ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಪ್ ಡಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು.ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರ ಜೆಎಪ್ ಎಸ್ ರಾಜೇಶ್ ರಾಜನ್,ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ,ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು. ಕುಂದಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿ ವಿ.ಸುಂದರ್ ಅಗ್ನಿನಂದಕದ ಕುರಿತಾಗಿ ಸಂಕ್ಷಿಪ್ತ ಮಾಹಿತಿ ನೀಡಿದರು.ತದನಂತರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಜನತಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು,ಕಿರಣ್ ಕಾರ್ಯಕ್ರಮ ನಿರ್ವಹಿಸಿದರು,ಜನತಾ ಹೆಮ್ಮಾಡಿ ಪ್ರೌಢಶಾಲಾ ಸಹ-ಶಿಕ್ಷಕ ಜಗದೀಶ್ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…