ಕುಂದಾಪುರ:ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಶಿರೂರು ಒತ್ತಿನೆಣೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿದ್ದು.ಗುಡ್ಡದ ಮಣ್ಣು ಸಡಿಲಗೊಂಡಿದೆ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಮೇಲೆ ಬೀಳುವ ಸಂಭವ ಎದುರಾಗಿದ್ದು ಆತಂಕ ಸೃಷ್ಟಿಯಾಗಿದೆ.
ಪ್ರತಿವರ್ಷದ ಮಳೆಗಾಲದ ಸಂದರ್ಭದಲ್ಲಿಯೂ ಇಲ್ಲಿ ಗುಡ್ಡ ಕುಸಿಯುವ ಭೀತಿ ಸೃಷ್ಟಿಯಾಗುತ್ತದೆ.ಸದ್ಯ ಒತ್ತಿನೆಣೆಯಲ್ಲಿ ನಿಧಾನವಾಗಿ ಗುಡ್ಡ ಜರಿಯಲು ಶುರುವಾಗಿದ್ದು,ಮಳೆ ಹೀಗೆ ಮುಂದುವರೆದರೆ ಸಂಪೂರ್ಣ ಗುಡ್ಡವೂ ಹೆದ್ದಾರಿ ಮೇಲೆ ಕುಸಿಯುವ ಆತಂಕವಿದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ ಉಡುಪಿ ಸಂಪರ್ಕ ಕಡಿತಗೊಳ್ಳಲಿದೆ. ವಾಹನ ಸವಾರರು ಭಯದಿಂದಲೇ ದಿನನಿತ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಎಚ್ಚರಿಕೆಯ ಕರೆಗಂಟೆ
ಐ ಆರ್ ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲಾಗಿತ್ತು. ಆದರೆ, ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪ್ರತೀ ವರ್ಷ ಇಂತಹ ಗುಡ್ಡ ಕುಸಿತದ ಭೀತಿ ಎದುರಿಸುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…