ಬೈಂದೂರು:ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಇಂಗ್ಲೀಷ್ ಮತ್ತು ಕನ್ನಡ ದ್ವಿಭಾಷಾ ಮಾಧ್ಯಮ ಒಂದನೇ ತರಗತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ದೀಪ ಬೆಳಗಿಸಿ ಚಾಲನೆ ನೀಡಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ರಾಧಾ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.
ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಡಾ.ಸುಬ್ರಹ್ಮಣ್ಯ ಭಟ್ ಅವರು ಕೊಡುಗೆಯಾಗಿ ನೀಡಿದ ಇಂಗ್ಲೀಷ್ ಪುಸ್ತಕಗಳನ್ನು ಒಂದನೇ ತರಗತಿ ಹಾಗೂ ಎಲ್ ಕೆ ಜಿ,ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ದೇವಾಡಿಗ ಮತ್ತು ಶಾರದಾ ದೇವಾಡಿಗ ವಿತರಿಸಿ ಶುಭ ಹಾರೈಸಿದರು.
ದಿ, ಶೇಷಗಿರಿ ಹೆಬ್ಬಾರ್ ನೆನಪಿನಾರ್ಥ ಅವರ ಮಗನಾದ ಗುರುರಾಜ ಹೆಬ್ಬಾರ್ ಕೊಡುಗೆಯಾಗಿ ನೀಡಿದ ಸಮವಸ್ತ್ರ ಮತ್ತು ಬೆಲ್ಟ್ ಜೆ ಸಿ ಐ ಉಪ್ಪುಂದ ಅಧ್ಯಕ್ಷ ಮಂಜುನಾಥ್ ದೇವಾಡಿಗ ಮಕ್ಕಳಿಗೆ ವಿತರಿಸಿದರು.
ಇದೇ ಸಂದರ್ಭ ಉದ್ಯಮಿ ನಾಗರಾಜ್ ಪೂಜಾರಿ, ಕೊಡೇರಿ ಅವರು ನೀಡಿದ ಕ್ರೀಡಾ ಸಾಮಗ್ರಿಗಳನ್ನು ಅವರ ಪತ್ನಿ ರಾಧಾ ಪೂಜಾರಿ ಶಾಲೆಗೆ ಹಸ್ತಾಂತರಿಸಿದರು.
ಗ್ಕುಮಾರ ದೇವಾಡಿಗ ಹಾಗೂ ರಾಮ ಬಾಳೆಬೆಟ್ಟು ಉಪಸ್ಥಿತರಿದ್ದರು.ಎಸ್ ಡಿ ಎಂ ಸಿ ಯ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಮಹಾಬಲ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಶತಮಾನ ಪೂರೈಸಿದ ಈ ಶಾಲೆಗೆ ಹಳೆ ವಿದ್ಯಾರ್ಥಿಗಳು, ದಾನಿಗಳ ಸಹಕಾರ ಅತಿ ಅಗತ್ಯವಾಗಿದೆ.ತೀರ ಹಳೆಯದಾದ ಕಟ್ಟಡಗಳಿಗೆ ಕಾಯಕಲ್ಪ ನೀಡಬೇಕಾಗಿದೆ. ಆದುದರಿಂದ ಶಾಲಾ ಭಾಗಿದಾರರು ತಮ್ಮ ಕೈಲಾದ ಸಹಾಯ, ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.ಶಿಕ್ಷಕರಾದ ನಾಗ ದೇವಾಡಿಗ ಸ್ವಾಗತಿಸಿದರು.ಶಿಕ್ಷಕಿಯರಾದ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿ,ನಾಗರತ್ನ.ಬಿ ವಂದಿಸಿದರು .ಶಿಕ್ಷಕಿಯರಾದ ಸರಸ್ವತಿ ಪಿ,ಅಕ್ಷತಾ ಎಮ್ ಶೆಟ್ಟಿ ಗೌರವ ಶಿಕ್ಷಕಿಯರಾದ ಪಲ್ಲವಿ, ಆಶಿಕಾ ಹಾಗೂ ಸುಶ್ಮಿತಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…