ಕುಂದಾಪುರ:ಬೈಂದೂರು ಪಡುವರಿ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು,ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು.ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.
ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು.ಈ ಬಗ್ಗೆ ಗಂಭೀರವಾಗಿ ಯೋಚಿಸಿ ಕ್ರಮಕ್ಕೆ ಸೂಚನೆಯನ್ನು ನೀಡಲಾಗಿತ್ತು.ಆದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಹೀಗಾಗುತ್ತಿದೆ.
ಗುಡ್ಡ ಜರಿದು ರಸ್ತೆ ಬ್ಲಾಕ್ ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ.ಹೀಗಾಗಿ ಕಾಮಗಾರಿಗೆ ಸಂಬಂಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು ಎಂದು ಶಾಸಕರು ಎಚ್ಚರಿಸಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು ಹಲವೆಡೆ ಮಳೆ ಹಾನಿ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ ಸಾಗುವ ಒತ್ತಿನೆಣೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.ದೊಂಬೆ ರಸ್ತೆಯನ್ನು ಅಧಿಕಾರಿಗಳು ಈ ಬಗೆಯಲ್ಲಿ ನಿರ್ಲಕ್ಷ್ಯ ಮಾಡಿವುದು ಯಾಕೆ ಎಂದು ಶಾಸಕರು ಪ್ರಶ್ನಿಸಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…