ಮಂಗಳೂರು:ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.
ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.
ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.
ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸು ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…