ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ ಪದಗ್ರಹಣ,ಕಾನೂನು ಅರಿವು ಮಾತುಕತೆ ಕಾರ್ಯಕ್ರಮ
ಕುಂದಾಪುರ:ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ,ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ವಿದ್ಯಾರ್ಥಿ ಪರಿಷತ್ ಪದಗ್ರಹಣ ಕಾರ್ಯಕ್ರಮ,ಹೂಡಿಕೆ ಸಮಾರಂಭ ಮತ್ತು ಕಾನೂನು ಅರಿವು ಮಾತುಕತೆ ಕಾರ್ಯಕ್ರಮ ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ ಸೋಮವಾರ ನಡೆಯಿತು.
ಹೆಚ್ಚುವರಿ ಪೆÇಲೀಸ್ ಅಧಿಕಾರಿ ಉಡುಪಿ ಎಸ್.ಟಿ ಸಿದ್ದಲಿಂಗಪ್ಪ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ,ಪ್ರಜಾಪ್ರಭುತ್ವ ಎಂದರೆ ಪ್ರಜೆಗಳಿಂದ ಪ್ರಜೆಗಳಿಗೊಸ್ಕರ ನಡೆಸುವ ಸರಕಾರವೆ ಪ್ರಜಾಪ್ರಭುತ್ವವಾಗಿದೆ.ಪ್ರಜೆಗಳಿಗೆ ಪ್ರಭುಗಳು ಆಗುವ ಹಕ್ಕು ಇರುವುದು ಭಾರತದ ದೇಶದಲ್ಲಿ ಮಾತ್ರ ಭಾರತದ ಆಡಳಿತ ವ್ಯವಸ್ಥೆ ಎನ್ನುವುದು ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ ಎಂದು ಹೇಳಿದರು.ಸಂವಿಧಾನದ ಬಗ್ಗೆ ಅರಿವುವನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಿಗಳಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆಯನ್ನು ನಡೆಸಲಾಗುತ್ತಿದೆ.ವಿದ್ಯಾರ್ಥಿಗಳಿಗೆ ಓದಿನ ಜತೆ ಸಾಮಾಜಿಕ ಅರಿವನ್ನು ಹೊಂದುವುದು ಮುಖ್ಯವಾಗಿದೆ.ಒಬ್ಬ ವ್ಯಕ್ತಿ ಉತ್ತಮ ನಾಯಕನಾಗಿ ಬೆಳೆಯಬೇಕಾದರೆ ಜ್ಞಾನ ಅವಶ್ಯಕವಾಗಿದೆ ಎಂದರು.
ಕಮಿಷನರ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಸ್ತು ಜವಾಬ್ದಾರಿ ಮತ್ತು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಮಂತ್ರಿ ಮಂಡಲದಲ್ಲಿ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು.ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಲು ಸಹಕಾರಿ ಆಗುತ್ತದೆ.ಗ್ರಾಮೀಣ ಪ್ರದೇಶದಲ್ಲಿ ಬೆಳೆದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಗುರಿಯನ್ನು ಇಟ್ಟುಕೊಂಡಿದ್ದರಿಂದ ಮಹಾನ್ ವಿಜ್ಞಾನಿಯಾಗಿ ರಾಷ್ಟ್ರಪತಿಗಳಾಗಿದ್ದಾರೆ ಎಂದರು.ಪಾಠ ಪ್ರವಚನಕ್ಕೆ ಮಾತ್ರ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಯಲ್ಲಿ ತಾವು ತೊಡಗಿಸಿಕೊಳ್ಳಬೇಕು.ಅಂಕಗಳಿಸುವುದರ ಜತೆಗೆ ಜೀವನದ ಪಾಠವನ್ನು ಕಲಿತು ಕೊಳ್ಳುವುದು ಅವಶ್ಯಕವಾಗಿದೆ ಎಂದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಕೋಶಾಧಿಕಾರಿ ಭರತ್ ಶೆಟ್ಟಿ ಅವರು ಮಾತನಾಡಿ,ಇಂದು ಮೊಳಕೆ ಒಡೆದ ಬೀಜ ದೇಶದ ರಾಜ್ಯದ ನಾಯಕತ್ವಕ್ಕೆ ಬುನಾದಿ ಆಗಲಿ ಎಂದು ಶುಭಹಾರೈಸಿರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮಾತನಾಡಿ,ಮಂತ್ರಿ ಮಂಡಲದ ಉದ್ದೇಶ ಪರಿಪೂರ್ಣವಾಗಬೇಕಾದರೆ ಮಂತ್ರಿ ಮಂಡಲದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪರಿಪಾಲನೆ ಮಾಡಬೇಕು.ವಿದ್ಯಾರ್ಥಿ ಜೀವನದಲ್ಲಿ ಗುರಿ ಮತ್ತು ಕನಸು ಮುಖ್ಯವಾಗಿದೆ.ಶಿಸ್ತನ್ನು ಎಲ್ಲರು ಮೈಗೂಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ರಮೇಶ ಶೆಟ್ಟಿ ಸಭೆಯನ್ನುದ್ದೆಶೀಸಿ ಮಾತನಾಡಿ,ಸಾಧಕರ ಸಾಧನೆಗಳನ್ನು ಮೈಗೂಡಿಸಿಕೊಂಡು ನಾವು ಕೂಡ ಅವರ ಹಾದಿಯಲ್ಲಿ ಸಾಗಲು ಪ್ರಯತ್ನಿಸಬೇಕು.ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಸಂಸತ್ ರಚನೆ ಮಾಡಲಾಗಿದ್ದು ಇದರ ಸದುಪಯೋಗವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕೆಂದರು.ಒಗ್ಗೂಡುವಿಕೆ ಮತ್ತು ಬದುಕನ್ನು ಗಟ್ಟಿಗೊಳಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಪೂರಕವಾಗಿರುತ್ತದೆ ಎಂದು ಹೇಳಿದರು.ಬಲಿಷ್ಠ ಭಾರತವನ್ನು ಕಟ್ಟುವ ಕೆಲಸ ವಿದ್ಯಾರ್ಥಿಗಳಿಂದ ಆಗಲಿ ಎಂದು ಶುಭಹಾರೈಸಿದರು.
ಖಂಜಾಚಿ ಭರತ್ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕಿ ದೀಕ್ಷಾ ನಿರೂಪಿಸಿದರು.ಶಿಕ್ಷಕಿ ಸಪ್ತಮಿ ವಂದಿಸಿದರು.ವಿದ್ಯಾರ್ಥಿ ಪರಿಷತ್‍ಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.