ಕುಂದಾಪುರ

ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ ಪದಗ್ರಹಣ,ಕಾನೂನು ಅರಿವು ಮಾತುಕತೆ ಕಾರ್ಯಕ್ರಮ

Share

ಕುಂದಾಪುರ:ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ,ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ವಿದ್ಯಾರ್ಥಿ ಪರಿಷತ್ ಪದಗ್ರಹಣ ಕಾರ್ಯಕ್ರಮ,ಹೂಡಿಕೆ ಸಮಾರಂಭ ಮತ್ತು ಕಾನೂನು ಅರಿವು ಮಾತುಕತೆ ಕಾರ್ಯಕ್ರಮ ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ ಸೋಮವಾರ ನಡೆಯಿತು.
ಹೆಚ್ಚುವರಿ ಪೆÇಲೀಸ್ ಅಧಿಕಾರಿ ಉಡುಪಿ ಎಸ್.ಟಿ ಸಿದ್ದಲಿಂಗಪ್ಪ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ,ಪ್ರಜಾಪ್ರಭುತ್ವ ಎಂದರೆ ಪ್ರಜೆಗಳಿಂದ ಪ್ರಜೆಗಳಿಗೊಸ್ಕರ ನಡೆಸುವ ಸರಕಾರವೆ ಪ್ರಜಾಪ್ರಭುತ್ವವಾಗಿದೆ.ಪ್ರಜೆಗಳಿಗೆ ಪ್ರಭುಗಳು ಆಗುವ ಹಕ್ಕು ಇರುವುದು ಭಾರತದ ದೇಶದಲ್ಲಿ ಮಾತ್ರ ಭಾರತದ ಆಡಳಿತ ವ್ಯವಸ್ಥೆ ಎನ್ನುವುದು ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ ಎಂದು ಹೇಳಿದರು.ಸಂವಿಧಾನದ ಬಗ್ಗೆ ಅರಿವುವನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಿಗಳಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆಯನ್ನು ನಡೆಸಲಾಗುತ್ತಿದೆ.ವಿದ್ಯಾರ್ಥಿಗಳಿಗೆ ಓದಿನ ಜತೆ ಸಾಮಾಜಿಕ ಅರಿವನ್ನು ಹೊಂದುವುದು ಮುಖ್ಯವಾಗಿದೆ.ಒಬ್ಬ ವ್ಯಕ್ತಿ ಉತ್ತಮ ನಾಯಕನಾಗಿ ಬೆಳೆಯಬೇಕಾದರೆ ಜ್ಞಾನ ಅವಶ್ಯಕವಾಗಿದೆ ಎಂದರು.
ಕಮಿಷನರ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಸ್ತು ಜವಾಬ್ದಾರಿ ಮತ್ತು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಮಂತ್ರಿ ಮಂಡಲದಲ್ಲಿ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು.ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಲು ಸಹಕಾರಿ ಆಗುತ್ತದೆ.ಗ್ರಾಮೀಣ ಪ್ರದೇಶದಲ್ಲಿ ಬೆಳೆದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಗುರಿಯನ್ನು ಇಟ್ಟುಕೊಂಡಿದ್ದರಿಂದ ಮಹಾನ್ ವಿಜ್ಞಾನಿಯಾಗಿ ರಾಷ್ಟ್ರಪತಿಗಳಾಗಿದ್ದಾರೆ ಎಂದರು.ಪಾಠ ಪ್ರವಚನಕ್ಕೆ ಮಾತ್ರ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಯಲ್ಲಿ ತಾವು ತೊಡಗಿಸಿಕೊಳ್ಳಬೇಕು.ಅಂಕಗಳಿಸುವುದರ ಜತೆಗೆ ಜೀವನದ ಪಾಠವನ್ನು ಕಲಿತು ಕೊಳ್ಳುವುದು ಅವಶ್ಯಕವಾಗಿದೆ ಎಂದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಕೋಶಾಧಿಕಾರಿ ಭರತ್ ಶೆಟ್ಟಿ ಅವರು ಮಾತನಾಡಿ,ಇಂದು ಮೊಳಕೆ ಒಡೆದ ಬೀಜ ದೇಶದ ರಾಜ್ಯದ ನಾಯಕತ್ವಕ್ಕೆ ಬುನಾದಿ ಆಗಲಿ ಎಂದು ಶುಭಹಾರೈಸಿರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮಾತನಾಡಿ,ಮಂತ್ರಿ ಮಂಡಲದ ಉದ್ದೇಶ ಪರಿಪೂರ್ಣವಾಗಬೇಕಾದರೆ ಮಂತ್ರಿ ಮಂಡಲದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪರಿಪಾಲನೆ ಮಾಡಬೇಕು.ವಿದ್ಯಾರ್ಥಿ ಜೀವನದಲ್ಲಿ ಗುರಿ ಮತ್ತು ಕನಸು ಮುಖ್ಯವಾಗಿದೆ.ಶಿಸ್ತನ್ನು ಎಲ್ಲರು ಮೈಗೂಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ರಮೇಶ ಶೆಟ್ಟಿ ಸಭೆಯನ್ನುದ್ದೆಶೀಸಿ ಮಾತನಾಡಿ,ಸಾಧಕರ ಸಾಧನೆಗಳನ್ನು ಮೈಗೂಡಿಸಿಕೊಂಡು ನಾವು ಕೂಡ ಅವರ ಹಾದಿಯಲ್ಲಿ ಸಾಗಲು ಪ್ರಯತ್ನಿಸಬೇಕು.ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಸಂಸತ್ ರಚನೆ ಮಾಡಲಾಗಿದ್ದು ಇದರ ಸದುಪಯೋಗವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕೆಂದರು.ಒಗ್ಗೂಡುವಿಕೆ ಮತ್ತು ಬದುಕನ್ನು ಗಟ್ಟಿಗೊಳಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಪೂರಕವಾಗಿರುತ್ತದೆ ಎಂದು ಹೇಳಿದರು.ಬಲಿಷ್ಠ ಭಾರತವನ್ನು ಕಟ್ಟುವ ಕೆಲಸ ವಿದ್ಯಾರ್ಥಿಗಳಿಂದ ಆಗಲಿ ಎಂದು ಶುಭಹಾರೈಸಿದರು.
ಖಂಜಾಚಿ ಭರತ್ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕಿ ದೀಕ್ಷಾ ನಿರೂಪಿಸಿದರು.ಶಿಕ್ಷಕಿ ಸಪ್ತಮಿ ವಂದಿಸಿದರು.ವಿದ್ಯಾರ್ಥಿ ಪರಿಷತ್‍ಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago