ಕುಂದಾಪುರ:ಪರ್ಸಿನ್ ಬೋಟ್,ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲರ್ ಬೋಟ್‍ಗಳ ಸಂಘದ ವತಿಯಿಂದ ಸಮುದ್ರಪೂಜೆ ಬುಧವಾರ ಗಂಗೊಳ್ಳಿಯಲ್ಲಿ ನಡೆಯಿತು.ಮತ್ಸ್ಯ ಸಂಪತ್ತು ವೃದ್ಧಿಗಾಗಿ ಹಾಗೂ ಮೀನುಗಾರಿಕೆಗೆ ಯಾವುದೆ ರೀತಿ ಅಡ್ಡಿ ಆತಂಕಗಳು ಎದುರಾಗದಿರಲಿ ಎಂದು ಸಮುದ್ರರಾಜನಿಗೆ ಹಾಲು,ಸೀಯಾಳ,ಫಲಪುಷ್ಪವನ್ನು ಅರ್ಪಿಸಿ ಮೀನುಗಾರರು ಪ್ರಾರ್ಥನೆಯನ್ನು ಸಲ್ಲಿಸಿದರು.
ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಪ್ರಭಾಕರ ಕುಂದರ್, ತ್ರಿಸೆವೆಂಟಿ ಬೋಟ್ ಸಂಘದ ಅಧ್ಯಕ್ಷ ಸೌಪರ್ಣಿಕಾ ಬಸವ ಖಾರ್ವಿ,ಟ್ರಾಲ್‍ಬೋಟ್ ಸಂಘದ ಅಧ್ಯಕ್ಷ ಗಣೇಶ್ ಖಾರ್ವಿ,ಮೀನುಗಾರರ ಮುಖಂಡರು,ಮೀನುಗಾರರು ಉಪಸ್ಥಿತರಿದ್ದರು.ಅರ್ಚಕ ವೇದ ಮೂರ್ತಿ ವಿಟ್ಠಲ್‍ದಾಸ್ ಭಟ್ ಹಾಗೂ ಅಜಿತ್ ಭಟ್ ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…