ಸರಕಾರದ ವಿರುದ್ಧ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ

Share

Advertisement
Advertisement
Advertisement

ಕುಂದಾಪುರ:ಕಾಂಗ್ರೆಸ್ ಸರ್ಕಾರ ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಬೈಂದೂರು ತಾಲೂಕು ಕಛೇರಿ ಎದುರು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ.
ಶಾಸಕರ ನೇತೃತ್ವದಲ್ಲಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು.ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದರು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ.ಇದರಿಂದ ಕೆರಳಿದ ಶಾಸಕರು ಜಿಲ್ಲಾಡಳಿತದ ವಿರುದ್ಧವೇ ಬೈಂದೂರು ತಾಲೂಕು ಆಡಳಿದ ಸೌದಧ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ ನಡೆಸುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕರು,ಜನ ಕರೆದಲ್ಲಿಗೆ ನಾನು ಹೋಗಬೇಕು,ನಾನು ಕರೆದಲ್ಲಿಗೆ ಜನರ ಅಹವಾಲು ಸ್ವೀಕರಿಸಲು ಅಧಿಕಾರಿಗಳು ಬರಬೇಕು.ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇರುವುದು ಜನಸೇವೆಗೆ.ಸರ್ಕಾರ ನೀಡಿದ ಒಂದು ಕಚೇರಿಯಲ್ಲಿ ಕಾಲ ಮೇಲೆ ಕಾಲು ಹಾಕಿ ದರ್ಬಾರ್‌ ನಡೆಸುವ ವ್ಯಕ್ತಿ ನಾನಲ್ಲ. ತಾಲ್ಲೂಕಿನ ಜನತೆಯ ಉಪಯೋಗಕ್ಕಾಗಿ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಚೇರಿ ತೆರೆದಿದ್ದೇನೆ.ಈ ಕಚೇರಿಗಳಲ್ಲಿ ನಡೆಯುವ ಸಭೆಗಳಿಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡುತ್ತಿರುವುದು ಏಕೆ? ಜಿಲ್ಲಾಧಿಕಾರಿಗಳಿಗೆ ರಾಜಕೀಯ ಒತ್ತಡವಿದ್ದರೆ ನೇರ ಹೇಳಿ ಬಿಡಲಿ.ಶಾಸಕನ ಹಕ್ಕು ಮೊಟಕುಗೊಳಿಸುತ್ತಿರುವ ಆಡಳಿತಯಂತ್ರದ ವಿರುದ್ಧ ಅಹೋರಾತ್ರಿ ಧರಣಿಯ ಸಮರ ಸಾರಿದ್ದೇನೆ.ಸ್ಪಷ್ಟನೆ ಲಭ್ಯವಾಗುವವರೆಗೆ ವಿರಮಿಸುವ ಮಾತೇ ಇಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page