ಕುಂದಾಪುರ:ಕಾಂಗ್ರೆಸ್ ಸರ್ಕಾರ ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಕಛೇರಿ ಎದುರು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ.
ಶಾಸಕರ ನೇತೃತ್ವದಲ್ಲಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು.ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದರು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ.ಇದರಿಂದ ಕೆರಳಿದ ಶಾಸಕರು ಜಿಲ್ಲಾಡಳಿತದ ವಿರುದ್ಧವೇ ಬೈಂದೂರು ತಾಲೂಕು ಆಡಳಿದ ಸೌದಧ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ ನಡೆಸುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕರು,ಜನ ಕರೆದಲ್ಲಿಗೆ ನಾನು ಹೋಗಬೇಕು,ನಾನು ಕರೆದಲ್ಲಿಗೆ ಜನರ ಅಹವಾಲು ಸ್ವೀಕರಿಸಲು ಅಧಿಕಾರಿಗಳು ಬರಬೇಕು.ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇರುವುದು ಜನಸೇವೆಗೆ.ಸರ್ಕಾರ ನೀಡಿದ ಒಂದು ಕಚೇರಿಯಲ್ಲಿ ಕಾಲ ಮೇಲೆ ಕಾಲು ಹಾಕಿ ದರ್ಬಾರ್ ನಡೆಸುವ ವ್ಯಕ್ತಿ ನಾನಲ್ಲ. ತಾಲ್ಲೂಕಿನ ಜನತೆಯ ಉಪಯೋಗಕ್ಕಾಗಿ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಚೇರಿ ತೆರೆದಿದ್ದೇನೆ.ಈ ಕಚೇರಿಗಳಲ್ಲಿ ನಡೆಯುವ ಸಭೆಗಳಿಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡುತ್ತಿರುವುದು ಏಕೆ? ಜಿಲ್ಲಾಧಿಕಾರಿಗಳಿಗೆ ರಾಜಕೀಯ ಒತ್ತಡವಿದ್ದರೆ ನೇರ ಹೇಳಿ ಬಿಡಲಿ.ಶಾಸಕನ ಹಕ್ಕು ಮೊಟಕುಗೊಳಿಸುತ್ತಿರುವ ಆಡಳಿತಯಂತ್ರದ ವಿರುದ್ಧ ಅಹೋರಾತ್ರಿ ಧರಣಿಯ ಸಮರ ಸಾರಿದ್ದೇನೆ.ಸ್ಪಷ್ಟನೆ ಲಭ್ಯವಾಗುವವರೆಗೆ ವಿರಮಿಸುವ ಮಾತೇ ಇಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…