ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಗೆ 2024 ರ ನವೆಂಬರ್ ತಿಂಗಳಿನಲ್ಲಿ ನೂರು ವರ್ಷ ತುಂಬಲಿದೆ.ಒಂದು ಶತಮಾನವನ್ನು ಪೂರೈಸಲಿರುವ ಯಳಜಿತ್ ಶಾಲೆಯಲ್ಲಿ ಸುಮಾರು 1.50 ಕೋಟಿ.ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶಾಲಾ ಶತಮಾನೋತ್ಸವ ಸಮಿತಿ ನಿರ್ಣಯಿಸಿದೆ.ಅದರ ಅಂಗವಾಗಿ ಶಾಲೆಯಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು ಕಟ್ಟಡದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಶಾಲಾ ಶತಮಾನೋತ್ಸವ ಕಟ್ಟಡದ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಹಣದ ಅಡಚಣೆ ಉಂಟಾಗಿದ್ದು.ಹಳೆ ವಿದ್ಯಾರ್ಥಿಗಳು,ವಿದ್ಯಾಭಿಮಾನಿಗಳು,ಗ್ರಾಮಸ್ಥರು,ಉದ್ಯಮಿಗಳು,ದಾನಿಗಳು ಹೆಚ್ಚಿನ ಸಹಕಾರ ನೀಡಬೇಕೆಂದು ಶಾಲಾ ಶತಮಾನೋತ್ಸವ ಸಮಿತಿ ವಿನಂತಿಸಿಕೊಂಡಿದೆ.
ಯಳಜಿತ್ ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ವಕೀಲರಾದ ಮಂಗೇಶ್ ಶಾನುಭಾಗ್ ಮಾತನಾಡಿ,ಶಾಲೆಯಲ್ಲಿ ಕಲಿತಿರುವ ಸಾವಿರಾರು ವಿದ್ಯಾರ್ಥಿಗಳು ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಮುಖೇನ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.ಶತಮಾನೋತ್ಸವ ಸಂಭ್ರಮವನ್ನು ಆವಿಸ್ಮರಣೀಯವಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು.ಧನ ಸಾಹಯ ಮಾಡುವುದರ ಮುಖೇನ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ ಮಾತನಾಡಿ,ಸುಮಾರು ನೂರು ವರ್ಷ ತುಂಬಲಿರುವ ಯಳಜಿತ್ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.ಹಾಗಾಗಿ ಶಾಲೆಯಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕ್ಕೆನ್ನುವ ಉದ್ದೇಶದೊಂದಿಗೆ ಈಗಾಗಲೆ ಚಾಲನೆ ನೀಡಲಾಗಿದೆ.ಎಲ್ಲರೂ ಸಹಕಾರ ನೀಡಬೇಕೆಂದು ವಿನಂತಿಕೊಂಡರು.
ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ ಮಾತನಾಡಿ,ಶಾಲೆಯನ್ನು ಉಳಿಸಿ ಬೆಳೆಸಬೇಕು ಎನ್ನುವ ಉದ್ದೇಶದಿಂದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಹಿತ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ಸಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾರ್ಯ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ.ಶಾಲೆಯ ಅಭಿವೃದ್ಧಿಗೆ ಸರಕಾರ ಮತ್ತು ದಾನಿಗಳು ಸಹಕರಿಸಬೇಕೆಂದು ಕೇಳಿಕೊಂಡರು.ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಚಂದನ್ ಬಿಲ್ಲವ,ಖಜಾಂಜಿ ಕೆ.ಎಂ ಕೊಠಾರಿ,ಕಾರ್ಯದರ್ಶಿ ಪದ್ಮಾವತಿ,ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಸುಕುಮಾರ ಗೌಡ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ,ಸಮಿತಿ ಸದಸ್ಯರು ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…