ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯರಾತ್ರಿ ಕಳವು ಗೈದಿರುವ ಹುಂಡಿ ಹಣವನ್ನು ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಗುಲಿಯಲ್ಲಿ ಕಳ್ಳ ಬಿಟ್ಟು ಹೋಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಹೆಮ್ಮಾಡಿ ಪ್ರಾಥಮಿಕ ಶಾಲೆ ಜಗುಲಿ ಮೇಲೆ ಹಸಿರು ಚೀಲ ಇರುವುದದನ್ನು ಶನಿವಾರ ಗಮನಿಸಿರುವ ಶಾಲೆ ಶಿಕ್ಷಕರು ಅಷ್ಟೇನು ಗಂಭೀರವಾಗಿ ಪರಿಗಣಿಸಿರಲಿಲ್ಲ.ಭಾನುವಾರ ಶಾಲೆಗೆ ರಜೆ ಇದ್ದಿದ್ದು.ಸೋಮವಾರ ಅದೇ ಸ್ಥಳದಲ್ಲಿದ್ದ ಚೀಲವನ್ನು ಗಮನಿಸಿದ ವಿದ್ಯಾರ್ಥಿಗಳು ಬೀಡಿಸಿ ನೋಡಿದಾಗ ಹಣ ಇರುವುದು ಬೆಳಕಿಗೆ ಬಂದಿದೆ.ಕೂಡಲೆ ದೇವಸ್ಥಾನದ ಸಮಿತಿ ಅವರಿಗೆ ಶಾಲೆ ಶಿಕ್ಷಕರು ತಿಳಿಸಿದ್ದಾರೆ.ಮಾಹಿತಿಯನ್ನು ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೆÇಲೀಸರು ಹಣದ ಚೀಲವನ್ನು ವಶಕ್ಕೆ ಪಡೆದಿದ್ದಾರೆ.ಚೀಲದಲ್ಲಿ ಹತ್ತು ರೂಪಾಯಿ ಮುಖ ಬೆಲೆಯ ನೋಟುಗಳು ಮಾತ್ರ ಪತ್ತೆ ಆಗಿದ್ದು ಅಂದಾಜು 3035.ರೂ ಇದೆ ಎಂದು ತಿಳಿದು ಬಂದಿದೆ.ದೊಡ್ಡ ಮೊತ್ತದ ಮುಖ ಬೆಲೆಯನ್ನು ಹೊಂದಿರುವ ನೋಟುಗಳನ್ನು ಕಳ್ಳ ಒಯ್ಯುದಿರುವ ಬಗ್ಗೆ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಕಳ್ಳ ಶಾಲೆಯ ಆವರಣವನ್ನು ಪ್ರವೇಶಿಸಿ ಶಾಲೆ ಜಗುಲಿಯಲ್ಲಿ ಕುಳಿತು ಕೊಂಡು ಹುಂಡಿ ಹಣವನ್ನು ವ್ಯವಸ್ಥಿತವಾದ ರೀತಿಯಲ್ಲಿ ಜೋಡಿಸಿಕೊಂಡು ಸ್ಥಳದಿಂದ ಪರಾರಿಯಾಗಿರ ಬಹುದೆಂದು ಘಟನೆಯ ಮೇಲನೋಟ ಸಾಕ್ಷಿ ನುಡಿಯುತ್ತಿದೆ ಎಂದು ಗ್ರಾಮಸ್ಥರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…