ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಆಧುನಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ಅಧ್ಯಾಯಕ್ಕೆ ಹೆಚ್ಚಿನ ಸಮಯ ಮೀಸಲು ಇಡಬೇಕೆಂದು ಹೇಳಿದರು.
ಕಾಲೇಜಿನ ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ ಮಾತನಾಡಿ,ಕಾಲೇಜಿನ ನೀತಿ ನಿಯಮದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ತಿಳಿಸಿದರು.
ಕಾಲೇಜಿನ ನಿರ್ದೇಶಕಿ ಮಮತಾ,ವೈಸ್ ಪ್ರಿನ್ಸಿಪಾಲ್ ಸುಜಾತ,ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ನಿರೂಪಿಸಿದರು. ಉಪನ್ಯಾಸಕಿ ಗೀತಾ ಸ್ವಾಗತಿಸಿದರು.ಉಪನ್ಯಾಸಕಿ ಶೈಲಾ ವಂದಿಸಿದರು.