ನಟ ರಿಷಬ್ ಶೆಟ್ಟಿ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ಕನ್ನಡ ಚಿತ್ರರಂಗದ ಖ್ಯಾತ ನಟ ರಾಷ್ಟ್ರ ಪ್ರಶಸ್ತಿ ಪುರಸ್ಕøತರಾದ ಕಾಂತಾರ ರಿಷಬ್ ಶೆಟ್ಟಿ ಅವರು ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮ್ಮ ಕುಟುಂಬದವರೊಂದಿಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ದೇವಸ್ಥಾನದ ಅರ್ಚಕರಾದ ನಾಗೇಂದ್ರ ಭಟ್ ಅವರು ರಿಷಬ್ ಶೆಟ್ಟಿ ದಂಪತಿಗಳನ್ನು ಗೌರವಿಸಿದರು.ಸಿಬ್ಬಂದಿಗಳು ಉಪಸ್ಥಿತರಿದ್ದರು.