ಶಿಕ್ಷಕ ಸುರೇಂದ್ರ ನಾಡ ಗುಡ್ಡೆಹೋಟೆಲ್‍ಗೆ ಇನ್ನೋವೇಟಿವ್ ಟೀಚರ್ ಅವಾರ್ಡ್

ಕುಂದಾಪುರ:ಉತ್ತಮ ತಲೆಮಾರುಗಳ ನಿರ್ಮಾಣ ಅಭಿಯಾನ ಕಾರ್ಯಕ್ರಮ ಹಾಗೂ ಭವಿಷ್ಯದಲ್ಲಿ ಸಂಪೂರ್ಣ ಸಾಕ್ಷರ ಕರ್ನಾಟಕ ರಾಜ್ಯವನ್ನು ಮಾಡುವ ನಿಟ್ಟಿನಲ್ಲಿ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ಬೆಂಗಳೂರಿಗೆ ವಲಸೆ ಬಂದ ಕೂಲಿ ಕಾರ್ಮಿಕ ಕುಟುಂಬ ಮತ್ತು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲು ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಸುರೇಂದ್ರ ನಾಡ ಗುಡ್ಡೆಹೋಟೆಲ್ ಅವರು ರಾಷ್ಟ್ರಮಟ್ಟದ ಇನ್ನೋವೇಟಿವ್ ಟೀಚರ್ ಅವಾರ್ಡ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಪ್ರಸ್ತುತ ಅವರು ಶ್ರೀ ಸಿದ್ಧಲಿಂಗೇಶ್ವರ ಕನ್ನಡ ಅನುದಾನಿತ ಪ್ರೌಢಶಾಲೆ ಮಾಗಡಿ ರಸ್ತೆ ಬೆಂಗಳೂರು ನಗರ ದಕ್ಷಿಣ ಜಿಲ್ಲೆ ವಲಯ-2 ರಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.