ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.
35ನೇ ವರ್ಷದ ಗಣಪತಿ ಉತ್ಸವ ಅಂಗವಾಗಿ ಶ್ರೀಗಣಪತಿ ದೇವರಿಗೆ ಮೂಡುಗಣಪತಿ ಸೇವೆ,ಕಡುಬು,ಪಾಯಸ,ಮೋದಕ,ಚಕ್ಕುಲಿ,ಲಾಡು ಸೇವೆ,ಹಣ್ಣುಕಾಯಿ,ಮಂಗಳಾರತಿ ಸೇವೆ,ರಂಗಪೂಜೆಯನ್ನು ಸಲ್ಲಿಸಲಾಯಿತು.ಕುಣಿತ ಭಜನೆ,ಭಜನಾ ಕಾರ್ಯಕ್ರಮ,ಗಣೇಶ ಚಿತ್ರ ಬಿಡಿಸುವ ಸ್ಪರ್ಧೆ ಜರುಗಿತು.
ಸೆ.8 ರಂದು ಭಾನುವಾರ ರಾತ್ರಿ 9 ಕ್ಕೆ ಸಾರ್ವಜನಿಕ ಸಭಾ ಕಾರ್ಯಕ್ರಮ,ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ 10ಕ್ಕೆ ಯಕ್ಷ ಕುಟುಂಬ ನಾಡ ಗುಡ್ಡೆಯಂಗಡಿ ಮಕ್ಕಳಿಂದ ಕದಂಬ ಕೌಶಿಕೆ ಯಕ್ಷಗಾನ ಕಾರ್ಯಕ್ರಮ ಜರುಗಲಿದೆ.ಸೆ.9 ರಂದು ಸೋಮವಾರ ಬೆಳಿಗ್ಗೆ 10ಕ್ಕೆ ಗಣಹೋಮ,ಪೂಜಾದಿ ಕಾರ್ಯಕ್ರಮಗಳು,ಮಹಾಪೂಜೆ ಮಧ್ಯಾಹ್ನ 1 ಕ್ಕೆ ವಿಸರ್ಜನಾ ಪೂಜೆ 1.30ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.ಸಂಜೆ 4ಕ್ಕೆ ಉತ್ಸವ ಮೂರ್ತಿಯ ಬೃಹತ್ ಮೆರವಣಿಗೆ ನಡೆಯಲಿದೆ.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…