ಕುಂದಾಪುರ:ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಉದ್ಘಾಟಿಸಿ ಶುಭಹಾರೈಸಿದರು.
ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ ಶೆಟ್ಟಿ,ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಎಸ್‍ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಸಂತೋಷ,ಹಾಲು ಉತ್ಪಾದಕರ ಸಂಘ ಮೊವಾಡಿ ಕಾರ್ಯನಿರ್ವಹಣಾಧಿಕಾರಿ ಶೇಖರ ಗಾಣಿಗ ಉಪಸ್ಥಿತರಿದ್ದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದನ್ನೊತಿ ಹೊಂದಿರುವ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ ಸ್ವಾಗತಿಸಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ವಂದಿಸಿದರು.
ಫಲಿತಾಂಶ ವಿವರ:ಬಾಲಕರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಕಂಚಿಕಾನ್ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಶಾಲೆ ಚಿತ್ತೂರು ದ್ವಿತೀಯ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಹಕ್ಲಾಡಿ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಚಿತ್ತೂರು ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…