ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ ದ್ವೈವಾರ್ಷಿಕ ಮಹಾಸಭೆ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಕಾಲಾವರ ವಾಚಿಸಿದರು.2024-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಸೌಕೂರು,ಉಪಾಧ್ಯಕ್ಷರಾಗಿ ಸುಧೀರ್ ಶೆಟ್ಟಿ ಕೆಂಚನೂರು,ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಹಿಲಿಯಾಣ,ಜೊತೆ ಕಾರ್ಯದರ್ಶಿಯಾಗಿ ಕೆ.ಸೂರ್ಯಕಾಂತ ಮತ್ತು ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಹೆಗ್ಡೆ ಶಾನಾಡಿ ಆಯ್ಕೆಯಾದರು.ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಬೆಟ್ಟಿನ್ ಮತ್ತು ವಾಚನಾಲಯ ಕಾರ್ಯದರ್ಶಿ ಯಾಗಿ ಆಯ್ಕೆ ಯಾದರು.ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಸದಾನಂದ ಶೆಟ್ಟಿ,ಸುಧೀರಕುಮಾರ ಶೆಟ್ಟಿ ಮಾರ್ಕೋಡ್,ಸಂತೋಷ ಕುಮಾರ್ ಶೆಟ್ಟಿ ನೂಜಾಡಿ,ಸಂತೋಷ ಕುಮಾರ್ ಶೆಟ್ಟಿ ಹಕ್ಲಾಡಿ,ತಮ್ಮಯ್ಯ ದೇವಾಡಿಗ ಮತ್ತು ಸುಂದರ ಶೆಟ್ಟಿ ದಾಸರ ಬೆಟ್ಟು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಬಿ.ಆರ್ ಶಾಲೆಯ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.ವೀರಣ್ಣ ಶೆಟ್ಟಿ ನಿರೂಪಿಸಿದರು.ಬಾಲಕೃಷ್ಣ ಶೆಟ್ಟಿ ಹಿಲಿಯಾಣ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…