ಕುಂದಾಪುರ

ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿ, ಇಹಲೋಕ ತ್ಯಜಿಸಿದ ಮಹಿಳೆ

Share

ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ ಸಾವನ್ನಪ್ಪಿದ ಮನಕಲಕುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಕುಂದಾಪುರ ತಾಲೂಕಿನ ಕೋಟೇಶ್ವರ ಸತೀಶ ಕಾಮತ್ ಅವರ ಸೊಸೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಚೇತನ್ ಕಾಮತ್ ಅವರ ಪತ್ನಿ ಅಂಕಿತಾ (ಅರ್ಚನಾ) ಕಾಮತ್ (33) ಅವರ ಸಂಬಂಧಿಕ ಮಹಿಳೆಯೊಬ್ಬರಿಗೆ ಯಕೃತ್ತಿನ (ಲಿವರ್) ಸಮಸ್ಯೆ ಇರುವುದರಿಂದ ಲಿವರ್‌ನಕಸಿ ಮಾಡಲು ತನ್ನ ಲಿವರ್‌ನ್ನೇ ದಾನ ಮಾಡಿದ್ದರು.
ಈ ಸಂದರ್ಭ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಮಂಗಳೂರಿನ ಮಣೇಲ್‌ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುವುದರ ಮೂಲಕ ಉತ್ತಮ ಮಾರ್ಗದರ್ಶಕರಾಗಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago