ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬ್ ನಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು,ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತಿರುವ,ಸಾಮಾಜಿಕ, ಶೈಕ್ಷಣಿಕ,ಧಾರ್ಮಿಕ,ಔದ್ಯೋಗಿಕ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಯನ್ನು ಗುರುತಿಸಿ,ಜೇಸಿ ಸಂಸ್ಥೆಯು ನೀಡುವ 2024ರ ಪ್ರತಿಷ್ಠಿತ ‘ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024′ ರ ಜೇಸಿ ಸಪ್ತಾಹದಲ್ಲಿ ಹಲವಾರು ಗಣ್ಯರು ಉಪಸ್ಥಿತಿಯಲ್ಲಿ’
ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಾಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವರಾಜ ಅರಸು ಜಯಂತೋತ್ಸವ ಪ್ರಯುಕ್ತ ಕೊಡಲ್ಪಡುವ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ್ ಅರಸು ರಾಜ್ಯ ಪ್ರಶಸ್ತಿಯನ್ನು ದಿನಾಂಕ 20/09/2024 ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿನಗರ ಶಿವಾನಂದ ಸರ್ಕಲ್ ಬೆಂಗಳೂರಿನಲ್ಲಿ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೀಡಲಾಗುವುದು.
ಮನೋರಂಜನೆ ಕಾರ್ಯಕ್ರಮವಾಗಿ ಜೇಸಿ ಯಕ್ಷೋತ್ಸವ “ರಾಣಿ ಶಶಿಪ್ರಭೆ” ಜೇಸಿ ಕಲಾವಿದರಿಂದ ನಡೆಯಿತು
ಮುದ್ದುಕೃಷ್ಣ ಸ್ಪರ್ಧೆ ಮುದ್ದು ರಾಧೆ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸನ್ಮಾನಿತರಾದ ಎನ್ ರಮೇಶ್ ದೇವಾಡಿಗ ಅವರು ಮಾತನಾಡಿ
ಜೇಸಿಐ ಉಪ್ಪುಂದ ಒಂದು ಅದ್ಭುತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಹೀಗೆ ಇವರ ಸಮಾಜಮುಖಿ ಕಾರ್ಯಕ್ರಮ ಮುಂದುವರೆಯಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಗಣ್ಯರು, ಜೇಸಿ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸ್ನೇಹಿತರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…