ಸರಕಾರದ ವಿರುದ್ಧ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ
ಕುಂದಾಪುರ:ಕಾಂಗ್ರೆಸ್ ಸರ್ಕಾರ ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಕಛೇರಿ ಎದುರು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ.ಶಾಸಕರ ನೇತೃತ್ವದಲ್ಲಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು.ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದರು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ.ಇದರಿಂದ ಕೆರಳಿದ ಶಾಸಕರು ಜಿಲ್ಲಾಡಳಿತದ ವಿರುದ್ಧವೇ ಬೈಂದೂರು ತಾಲೂಕು ಆಡಳಿದ ಸೌದಧ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ […]