ಸೋಮೇಶ್ವರ ಬಳಿ ಗುಡ್ಡ ಕುಸಿತ ಭೀತಿ:ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

ಕುಂದಾಪುರ:ಬೈಂದೂರು ಪಡುವರಿ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು,ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು.ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು.ಈ ಬಗ್ಗೆ […]

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ

ಬೈಂದೂರು:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಅವರು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ಪರಿಸ್ಥಿತಿಯನ್ನು ಅವಲೋಕಿಸಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ ಮಾತನಾಡಿ, ಮಳೆಗಾಲದಲ್ಲಿ ಸೌಪರ್ಣಿಕಾ ನದಿ ಉಕ್ಕಿ ಹರಿಯುವುದರಿಂದ ನದಿ ತೀರ ಪ್ರದೇಶದಲ್ಲಿ ಪ್ರತಿ ವರ್ಷ ನೆರೆ ಬಂದು ಸಾಕಷ್ಟು ಹಾನಿ ಸಂಭವಿಸುತ್ತಿದೆ.ನದಿ ದಂಡೆ ಏರಿಕೆ ಯಿಂದ ಹೆಚ್ಚಿನ ಅನಾಹುತ ತಪ್ಪಿಸಬಹುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಗ್ರಾಮಸ್ಥರು […]

ಕಂಬದಕೋಣೆ ಶಾಲೆ: ಇಂಗ್ಲೀಷ್,ಕನ್ನಡ ದ್ವಿಭಾಷಾ ಮಾಧ್ಯಮ ಆರಂಭ,ವಿವಿಧ ಕೊಡುಗೆ ಕಾರ್ಯಕ್ರಮ

ಬೈಂದೂರು:ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಇಂಗ್ಲೀಷ್ ಮತ್ತು ಕನ್ನಡ ದ್ವಿಭಾಷಾ ಮಾಧ್ಯಮ ಒಂದನೇ ತರಗತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ದೀಪ ಬೆಳಗಿಸಿ ಚಾಲನೆ ನೀಡಿದರು.ಎಸ್ ಡಿ ಎಂ ಸಿ ಅಧ್ಯಕ್ಷೆ ರಾಧಾ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಡಾ.ಸುಬ್ರಹ್ಮಣ್ಯ ಭಟ್ ಅವರು ಕೊಡುಗೆಯಾಗಿ ನೀಡಿದ ಇಂಗ್ಲೀಷ್ ಪುಸ್ತಕಗಳನ್ನು ಒಂದನೇ ತರಗತಿ ಹಾಗೂ ಎಲ್ ಕೆ ಜಿ,ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ […]

You cannot copy content of this page