ಹೆಮ್ಮಾಡಿ-ತ್ರಾಸಿಯಲ್ಲಿ ಅಂಡರ್ ಪಾಸ್‌ಗೆ ಅನುಮೋದನೆ

ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಅಪಾಯಕಾರಿ ಜಂಕ್ಷನ್ ತಲ್ಲೂರು,ಹೆಮ್ಮಾಡಿ.ತ್ರಾಸಿ ಹಾಗೂ ಯಡ್ತರೆಯಲ್ಲಿ ಅಂಡರ್‌ಪಾಸ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.ಬೈಂದೂರು ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಿಸುವಂತೆ ಡಿಸೆಂಬರ್ ತಿಂಗಳಿನಲ್ಲಿಯೇ ಮನವಿಯನ್ನು ಸಲ್ಲಿಸಲಾಗಿದ್ದು.ಕೇಂದ್ರ ಸಚಿವರು ಮನವಿಯನ್ನು ಪುರಸ್ಕರಿಸಿದ್ದಾರೆ.ಒಟ್ಟು ಆರು ಕಡೆ ಅಂಡರ್‌ಪಾಸ್ ನಿರ್ಮಿಸುವಂತೆ ಮನವಿಯನ್ನು ನೀಡಲಾಗಿದ್ದು […]

ತನ್ವಿತಾ ಪೂಜಾರಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ:ಅಂತರಾಷ್ಟ್ರೀಯ ಮಟ್ಟದ ಯೋಗಪಟು ತನ್ವಿತಾ ವಿ ಪೂಜಾರಿ ಅವರನ್ನು ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ವತಿಯಿಂದ ನಡೆದ 32ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.ಕುಂದಬಾರಂದಾಡಿ ಪುಷ್ಪಲತಾ ವಸಂತ ಪೂಜಾರಿ ಮಗಳು,ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ.

ಕಾರ್ಗಿಲ್ ವಿಜಯ ದಿವಸ್:ವಿದ್ಯಾರ್ಥಿ ಜೀವನದಲ್ಲಿಯೇ ರಾಷ್ಟ್ರ ಭಕ್ತಿ ಮೈಗೂಡಿಸಿಕೊಳ್ಳಬೇಕು-ಪ್ರಿನ್ಸಿಪಾಲ್ ಗಣೇಶ ಮೊಗವೀರ

ಕುಂದಾಪುರ:ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ಮತ್ತು ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮಿಡೀಯಂ ಸ್ಕೂಲ್‌ನಲ್ಲಿ (ಶುಭದಾ) ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಶುಕ್ರವಾರ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಹೆಮ್ಮಾಡಿ ಜನತಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲೆ ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿ ಕೊಳ್ಳಬೇಕು.ಸೈನಿಕರು ಹಾಗೂ ರೈತರು ನಮ್ಮ ದೇಶದ ರಿಯಲ್ ಹಿರೋಗಳು ಎಂದು ಅಭಿಪ್ರಾಯಪಟ್ಟರು.ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮಿಷನ್ಸ್ ಅಧಿಕಾರಿ ಜೋಷಿ ಪಿ.ಪಿ.ಹುತಾತ್ಮ ಸೈನಿಕರ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]

You cannot copy content of this page