ಮಳೆಹಾನಿಗೆ ತುರ್ತು ಪರಿಹಾರ ಒದಗಿಸಲು ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ:ಸಾರ್ವಜನಿಕ ದೂರಿಗೆ ಸಕಾರಾತ್ಮಕ ಸ್ಪಂದನೆ ಅಗತ್ಯ
ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರುನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ ಹಾಳಾಗಿದೆ. ಇನ್ನು ಕೆಲವು ಭಾಗದಲ್ಲಿ ಕಡಲ್ಕೊರೆತದಿಂದ ತೆಂಗಿನ ಮರಗಳು ಸಹಿತ ಆಸ್ತಿಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ. […]



















































































































































































































































































































































































































































































































































































































































































































































































































































































































































































































































































































































































































































































































































































































































































