ಶಾಸಕ ಡಾ.ವೈ ಭರತ್ ಶೆಟ್ಟಿ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ:ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರು:ಶಾಸಕ ಡಾ ವೈ ಭರತ್ ಶೆಟ್ಟಿ ಅವರು‌ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಕಾವೂರು ಜಂಕ್ಷನ್ನಲ್ಲಿ‌ ಪ್ರತಿಭಟನೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಜಂಕ್ಷನ್ ಪಕ್ಕದಲ್ಲೇ ಇದ್ದ ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು‌ ಪೊಲಿಸರು ತಡೆದಂತಹ ಸಮಯದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ನೂರಕ್ಕು ಹೆಚ್ಚು ಮಂದಿ ಕಾರ್ಯಕರ್ತರು, ಮುಖಂಡರನ್ನು‌ಪೊಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಇನಾಯತ್ ಆಲಿ,ಕೆಪಿಸಿಸಿ ವಕ್ತಾರ ಎಂಜಿ‌ಹೆಗಡೆ,ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]

ಬಸ್ ಬೈಕ್ ಡಿಕ್ಕಿ ಪೌರಕಾರ್ಮಿಕರ ಸಾವು

ಕುಂದಾಪುರ:ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿಪೌರಕಾರ್ಮಿಕ ಸಾವನ್ನಪ್ಪಿದ್ದಾರೆ.ಅಪಘಾತದ ತೀವ್ರತೆಗೆ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಖ್ಯಾತ ನಿರೂಪಕಿ ಅಪರ್ಣಾ ನಿಧನ

ಬೆಂಗಳೂರು:ಕನ್ನಡ ಚಲನಚಿತ್ರ ರಂಗದ ಜನಪ್ರಿಯ ಚಿತ್ರ ನಟಿ ಮತ್ತು ಖ್ಯಾತ ನಿರೂಪಕಿ ಅಪರ್ಣಾ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.ತನ್ನ ವಿಭಿನ್ನ ಶೈಲಿಯ ನಿರೂಪಣೆ ಯೊಂದಿಗೆ ಕನ್ನಡ ನಾಡಿನಲ್ಲಿ ಮನೆ ಮಾತಾಗಿದ್ದರು.

You cannot copy content of this page