ಬಾವಿಗೆ ಕಾಲು ಜಾರಿ ಬಿದ್ದು ಕೃಷಿಕ ಸಾವು
ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು ಇಟ್ಟುಕೊಂಡಿದ್ದರು.ದಿನ ನಿತ್ಯದ ರೂಢಿಯಂತೆ ಬುಧವಾರ ಬೆಳಗಿನ ಸಮಯದಲ್ಲಿ ತೋಟಕ್ಕೆ ಕಾಯಿಯನ್ನು ಹೆಕ್ಕಲು ಮನೆಯಿಂದ […]