ಕುರುದ್ವೀಪ ಪ್ರದೇಶದಲ್ಲಿ ಮತ್ತೆ ನೆರೆ

ಕುಂದಾಪುರ:ಬುಧವಾರ ದಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುದ್ವೀಪ ಪ್ರದೇಶದಲ್ಲಿ ಗುರುವಾರ ಮತ್ತೆ ನೆರೆ ನೀರು ಆವರಿಸಿದ್ದು.ಆಳೆತ್ತರದ ನೀರು ಮನೆಯನ್ನು ಆವರಿಸಿದೆ.ಹದಿನೈದು ದಿನಗಳಿಂದ ನಿರಂತರವಾಗಿ ನೆರೆ ಕಾಣಿಸಿಕೊಂಡಿದ್ದರಿಂದ ದ್ವೀಪ ವಾಸಿಗಳ ನಿದ್ದೆ ಹಾಳು ಗೇಡವಿದೆ.ಆತಂಕದಲ್ಲೆ ಜೀವನವನ್ನು ಸಾಗಿಸುವಂತೆ ಆಗಿದೆ.

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ:ಚಾಲಕ ಪಾರು

ಮಂಗಳೂರು:ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ […]

ಸೋಮೇಶ್ವರ ಬಳಿ ಗುಡ್ಡ ಕುಸಿತ ಭೀತಿ:ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

ಕುಂದಾಪುರ:ಬೈಂದೂರು ಪಡುವರಿ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು,ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು.ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು.ಈ ಬಗ್ಗೆ […]

You cannot copy content of this page